ಅಫ್ಘಾನಿಸ್ತಾನದ ಪೂರ್ವ ಗಡಿ ಪ್ರಾಂತ್ಯದ ಬರ್ಮಾಲ್ ಜಿಲ್ಲೆಯ 7 ಗ್ರಾಮಗಳ ಮೇಲೆ ಮಂಗಳವಾರ ರಾತ್ರಿ ಪಾಕಿಸ್ತಾನ ವೈಮಾನಿಕ ದಾಳಿ ನಡೆಸಿದೆ. ದಾಳಿಯಲ್ಲಿ 46 ಮಂದಿ ಹತ್ಯೆಯಾಗಿದ್ದಾರೆ. ಇದರಲ್ಲಿ ಬಹುತೇಕರು ಮಹಿಳೆಯರು ಮತ್ತು ಮಕ್ಕಳು ಎಂದು ತಾಲಿಬಾನ್ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.
ಬರ್ಮಾಲ್: ಅಫ್ಘಾನಿಸ್ತಾನದ ಪೂರ್ವ ಗಡಿ ಪ್ರಾಂತ್ಯದ ಬರ್ಮಾಲ್ ಜಿಲ್ಲೆಯ 7 ಗ್ರಾಮಗಳ ಮೇಲೆ ಮಂಗಳವಾರ ರಾತ್ರಿ ಪಾಕಿಸ್ತಾನ ವೈಮಾನಿಕ ದಾಳಿ ನಡೆಸಿದೆ. ದಾಳಿಯಲ್ಲಿ 46 ಮಂದಿ ಹತ್ಯೆಯಾಗಿದ್ದಾರೆ. ಇದರಲ್ಲಿ ಬಹುತೇಕರು ಮಹಿಳೆಯರು ಮತ್ತು ಮಕ್ಕಳು ಎಂದು ತಾಲಿಬಾನ್ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.
ಅಫ್ಘನ್ ಭೂಪ್ರದೇಶದಲ್ಲಿ ಪಾಕಿಸ್ತಾನದ ದಾಳಿಯನ್ನು ತಾಲಿಬಾನ್ ಸರ್ಕಾರದ ರಕ್ಷಣಾ ಸಚಿವಾಲಯ ಖಂಡಿಸಿದ್ದು, ಇದು ಅನಾಗರಿಕ, ಆಕ್ರಮಣಶೀಲತೆಯ ಪ್ರತಿಬಿಂಬ ಎಂದು ಹೇಳಿಕೆಯಲ್ಲಿ ಕಿಡಿಕಾರಿದೆ.
ದಾಳಿ ಏಕೆ: ತೆಹ್ರೀಕ್ ಎ ತಾಲಿಬಾನ್ ಪಾಕಿಸ್ತಾನ್ ಸಂಘಟನೆ ಕಳೆದ 2-3 ವರ್ಷದಿಂದ ಪಾಕ್ ಸೇನೆಯನ್ನು ಗುರಿಯಾಗಿಸಿ ಭಾರೀ ಪ್ರಮಾಣದಲ್ಲಿ ದಾಳಿ ನಡೆಸುತ್ತಿದೆ. ಇದನ್ನು ತಡೆಯುವ ಉಗ್ರ ಸಂಘಟನೆ ಜೊತೆ ಪಾಕ್ ಒಪ್ಪಂದ ಮಾಡಿಕೊಂಡಿತ್ತಾದರೂ, ಅದನ್ನು ಉಗ್ರರು 2022ರಲ್ಲೇ ಉಲ್ಲಂಘಿಸಿದ್ದಾರೆ. ಕಳೆದ 10 ತಿಂಗಳ ಅವಧಿಯಲ್ಲಿ ಉಗ್ರರು 1000ಕ್ಕೂ ಹೆಚ್ಚು ದಾಳಿ ನಡೆಸಿದ್ದು, ಅದರಲ್ಲಿ 500ಕ್ಕೂ ಹೆಚ್ಚು ಯೋಧರು ಮತ್ತು ನಾಗರಿಕರು ಬಲಿಯಾಗಿದ್ದಾರೆ. ಹೀಗಾಗಿ ಉಗ್ರರನ್ನು ಮಟ್ಟಹಾಕಲು ಪಾಕಿಸ್ತಾನ ಈ ವಾಯು ದಾಳಿ ನಡೆಸಿದೆ.
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.