ಸಾರಾಂಶ
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷದ ಬಳಿಕ ಭಾರತದ ಬರುವ ವಿಮಾನಗಳಿಗೆ ತನ್ನ ದೇಶದ ವಾಯುನೆಲೆಯನ್ನು ಬಂದ್ ಮಾಡಿದ್ದ ಪಾಕಿಸ್ತಾನ ಆ ನಿರ್ಬಂಧವನ್ನು ಇನ್ನು ಒಂದು ತಿಂಗಳು ಮುಂದುವರೆಸಲು ನಿರ್ಧರಿಸಿದೆ.ಪಹಲ್ಗಾಂ ನರಮೇಧದ ಬಳಿಕ ಕಳೆದ ತಿಂಗಳು ಪಾಕಿಸ್ತಾನ ಭಾರತೀಯ ವಿಮಾನಗಳಿಗೆ ತನ್ನ ದೇಶದ ವಾಯುಪ್ರದೇಶವನ್ನು ಬಂದ್ ಮಾಡಿತ್ತು.
ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆ( ಐಸಿಎಒ) ನಿಯಮಗಳ ಪ್ರಕಾರ ಒಂದು ತಿಂಗಳಿಗಿಂತ ಹೆಚ್ಚು ಕಾಲ ವಾಯುಪ್ರದೇಶದ ಮೇಲೆ ನಿರ್ಬಂಧ ವಿಧಿಸಲು ಅವಕಾಶ ಇಲ್ಲದ ಕಾರಣ, ಮೇ 23ರವರೆಗೆ ಪಾಕಿಸ್ತಾನ ಭಾರತೀಯ ವಿಮಾನಗಳಿಗೆ ನಿರ್ಬಂಧ ಹೇರಿತ್ತು. ಮೇ 23ಕ್ಕೆ ಗಡುವು ಮುಕ್ತಾಯ ಹಿನ್ನೆಲೆಯಲ್ಲಿ ಪಾಕಿಸ್ತಾನವು ಇನ್ನು ಒಂದು ತಿಂಗಳು ವಿಸ್ತರಣೆ ಮಾಡಿ ವಾಯು ಪಡೆಗೆ ಆದೇಶಿಸುವ ಸಾಧ್ಯತೆಯಿದೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಪಾಕಿಸ್ತಾನ ಭಾರತದ ವಿಮಾನಗಳಿಗೆ ನಿರ್ಬಂಧ ವಿಧಿಸುವುದು ಇದೇ ಮೊದಲೇನಲ್ಲ. 1999 ಕಾರ್ಗಿಲ್ ಯುದ್ಧ, 2019ರ ಪುಲ್ವಾಮ ದಾಳಿ ಸಂದರ್ಭದಲ್ಲಿಯೂ ಇಂತಹದ್ದೇ ನಡೆ ಅನುಸರಿಸಿತ್ತು.