ಸಾರಾಂಶ
ಲೋಕಸಭೆ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ ಬಜೆಟ್ ಅಧಿವೇಶನವನ್ನು ಜ.31ರಿಂದ ಫೆ.9ರವರೆಗೆ ನಡೆಸುತ್ತದೆ ಎನ್ನಲಾಗಿದೆ.
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಜ.31ರಿಂದ ಫೆಬ್ರವರಿ 9ರ ಅವಧಿಯಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಜ.31ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ನಂತರ ಫೆ.1ರಂದು ಸರ್ಕಾರವು ಮಧ್ಯಂತರ ಬಜೆಟ್ ಮಂಡಿಸಲಿದೆ. ಪ್ರಸ್ತುತ 17ನೇ ಲೋಕಸಭೆಯ ಅವಧಿ ಜೂನ್ 16 ರಂದು ಕೊನೆಗೊಳ್ಳುವುದರಿಂದ, ಬಳಿಕ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಚುನಾಯಿತವಾದ ಹೊಸ ಸರ್ಕಾರ ಬಳಿಕ ಪೂರ್ಣಪ್ರಮಾಣದ ಬಜೆಟ್ ಮಂಡನೆ ಮಾಡಲಿದೆ.