ಸಾರಾಂಶ
ಡಿ.13ರಂದು ಸಂಸತ್ತಿನ ಒಳಗೆ ಹೊಗೆ ಬಾಂಬ್ ಸಿಡಿಸಿ ದಾಳಿ ನಡೆಸಿದ ಪ್ರಕರಣದ 6 ಆರೋಪಿಗಳ ಪೈಕಿ ಐವರಿಗೆ ಶುಕ್ರವಾರ ಸುಳ್ಳುಪತ್ತೆ ಪರೀಕ್ಷೆ ಮತ್ತು ಮಂಪರು ಪರೀಕ್ಷೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನವದೆಹಲಿ: ಡಿ.13ರಂದು ಸಂಸತ್ತಿನ ಒಳಗೆ ಹೊಗೆ ಬಾಂಬ್ ಸಿಡಿಸಿ ದಾಳಿ ನಡೆಸಿದ ಪ್ರಕರಣದ 6 ಆರೋಪಿಗಳ ಪೈಕಿ ಐವರಿಗೆ ಶುಕ್ರವಾರ ಸುಳ್ಳುಪತ್ತೆ ಪರೀಕ್ಷೆ ಮತ್ತು ಮಂಪರು ಪರೀಕ್ಷೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೈಸೂರಿನ ಡಿ. ಮನೋರಂಜನ್ ಸೇರಿದಂತೆ ಇತರ ನಾಲ್ವರು ಆರೋಪಿಗಳಾದ ಸಾಗರ್ ಶರ್ಮಾ, ಅಮೋಲ್ ಶಿಂಧೆ, ಲಲಿತ್ ಝಾ ಮತ್ತು ಮಹೇಶ್ ಕುಮಾವತ್ ಅವರಿಗೆ ಗುಜರಾತ್‌ನ ಗಾಂಧಿನಗರದ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ.
ಈ ವೇಳೆ ಮನೋರಂಜನ್ ಹಾಗೂ ಸಾಗರ್ ಅವರಿಗೆ ಹೆಚ್ಚುವರಿಯಾಗಿ ಬ್ರೈನ್ ಮ್ಯಾಪಿಂಗ್ ಪರೀಕ್ಷೆ ನಡೆಸಲಾಗಿದೆ. ಪ್ರಕರಣದ ಏಕೈಕ ಮಹಿಳಾ ಆರೋಪಿ ನೀಲಂ ಮಂಪರು ಪರೀಕ್ಷಗೆ ತನ್ನ ಒಪ್ಪಿಗೆ ನೀಡಿರಲಿಲ್ಲ. ಹೀಗಾಗಿ ಐವರಿಗೆ ಪರೀಕ್ಷೆ ನಡೆಸಲು ದೆಹಲಿ ನ್ಯಾಯಾಲಯ ಆದೇಶಿಸಿತ್ತು.