ಸಾರಾಂಶ
ನಟ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಪೀಠಾಪುರಂ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದಾರೆ.
ಅಮರಾವತಿ: ಲೋಕಸಭೆ ಚುನಾವಣೆ ಜೊತೆಗೆ ಆಂಧ್ರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಚಟುವಟಿಕೆಗಳೂ ಗರಿಗೆದರಿದ್ದು, ನಟ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಪೀಠಾಪುರಂ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದಾರೆ.
ಇದೇ ವರ್ಷ ನಡೆಯುವ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೆ ಬಿಜೆಪಿ, ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಹಾಗೂ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷ ಮೈತ್ರಿ ಮಾಡಿಕೊಂಡಿದೆ. ಇದರನ್ವಯ ಲೋಕಸಭೆಗೆ ಬಿಜೆಪಿ-6, ಟಿಡಿಪಿ - 17 ಹಾಗೂ ಜನಸೇನಾ 2 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಲಿದೆ. ಇನ್ನು ವಿಧಾನಸಭೆಯಲ್ಲಿ ಬಿಜೆಪಿ - 10, ಟಿಡಿಪಿ - 144 ಹಾಗೂ ಜನಸೇನಾ - 21 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.