ಇಡಿಯಿಂದ ಪೇಟಿಎಂ ಅಧಿಕಾರಿಗಳ ವಿಚಾರಣೆ: ದಾಖಲೆಗಳ ವಶ

| Published : Feb 16 2024, 01:51 AM IST

ಸಾರಾಂಶ

ಜಾರಿ ನಿರ್ದೇಶನಾಲಯದಿಂದ ಪೇಟಿಎಂ ಅಧಿಕಾರಿಗಳ ವಿಚಾರಣೆ ಪ್ರಾರಂಭವಾಗಿದ್ದು, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ.

ನವದೆಹಲಿ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯಲ್ಲಿ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ ಕೆಲವು ಲೋಪದೋಷಗಳನ್ನು ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅದರ ಕೆಲವು ಹಿರಿಯ ಅಧಿಕಾರಿಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಗುರುವಾರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಸಂದರ್ಭದಲ್ಲಿ ಕೆಲವು ಮಹತ್ವದ ದಾಖಲೆಗಳನ್ನೂ ಸಹ ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದ್ದು, ಮತ್ತಷ್ಟು ದಾಖಲೆಗಳನ್ನು ನೀಡುವಂತೆ ಕೇಳಲಾಗಿದೆ. ದಾಖಲೆಗಳ ಪರಿಶೀಲನೆ ವೇಳೆ ಅಕ್ರಮಗಳು ಕಂಡುಬಂದಲ್ಲಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ.

ಫೆ.29ರ ಬಳಿಕ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ಗೆ ತನ್ನ ವ್ಯವಹಾರಗಳನ್ನು ನಿಲ್ಲಿಸುವಂತೆ ಇತ್ತೀಚೆಗೆ ಆರ್‌ಬಿಐ ಸೂಚನೆ ನೀಡಿತ್ತು.