ಕೇಜ್ರಿಯನ್ನು ಸಿಎಂ ಹುದ್ದೆಯಿಂದ ವಜಾ ಮಾಡಿ: ಪಿಐಎಲ್‌

| Published : Mar 23 2024, 01:15 AM IST / Updated: Mar 23 2024, 08:40 AM IST

ಸಾರಾಂಶ

ಬಂಧನದ ಕಾರಣ ವಜಾ ಮಾಡಬೇಕೆಂದು ಅರ್ಜಿ ಸಲ್ಲಿಕೆಯಾಗಿದೆ.

ನವದೆಹಲಿ: ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪದ ಮೇಲೆ ಜಾರಿ ನಿರ್ದೇಶನಾಲಯದಿಂದ ಬಂಧಿತನಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಮುಖ್ಯಮಂತ್ರಿ ಪದವಿಯಿಂದ ವಜಾ ಮಾಡಬೇಕೆಂದು ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ದಾಖಲಾಗಿದೆ. 

ಸುರ್ಜಿತ್‌ ಸಿಂಗ್‌ ಯಾದವ್‌ ಎನ್ನುವವರು ಸಲ್ಲಿಸಿರುವ ಅರ್ಜಿಯಲ್ಲಿ, ‘ಕೇಂದ್ರ ಸರ್ಕಾರ, ದೆಹಲಿ ರಾಜ್ಯ ಸರ್ಕಾರ ಮತ್ತು ದೆಹಲಿ ಉಪರಾಜ್ಯಪಾಲರ ಕಾರ್ಯದರ್ಶಿಯು ಅರವಿಂದ್‌ ಕೇಜ್ರಿವಾಲ್‌ ಅವರು ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರೆದಿರುವುದರ ಕುರಿತು ಸ್ಪಷ್ಟೀಕರಣ ನೀಡಬೇಕು ಮತ್ತು ಅವರನ್ನು ಮುಖ್ಯಮಂತ್ರಿ ಪದವಿಯಿಂದ ತೆರವು ಮಾಡಬೇಕು’ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.