ಸಾರಾಂಶ
ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಬಹಿರಂಗ ಪ್ರಚಾರ ಅಂತ್ಯಗೊಳ್ಳುವ ಮೊದಲು ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ವಾಕ್ಸಮರ ತಾರಕಕ್ಕೇರಿದ್ದು, 2014ರಲ್ಲಿ ಪ್ರಧಾನಿ ಮೋದಿ ನೀಡಿದ್ದ ಭರವಸೆ ಹುಸಿಗೊಳಿಸಿದರು,
ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಬಹಿರಂಗ ಪ್ರಚಾರ ಅಂತ್ಯಗೊಳ್ಳುವ ಮೊದಲು ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ವಾಕ್ಸಮರ ತಾರಕಕ್ಕೇರಿದ್ದು, 2014ರಲ್ಲಿ ಪ್ರಧಾನಿ ಮೋದಿ ನೀಡಿದ್ದ ಭರವಸೆ ಹುಸಿಗೊಳಿಸಿದರು, 2019ರಲ್ಲಿ ಜನರ ನಂಬಿಕೆಗೆ ದ್ರೋಹ ಬಗೆದ ಹಿನ್ನೆಲೆಯಲ್ಲಿ 2024ರಲ್ಲಿ ಅವರು ನಿರ್ಗಮಿಸುವುದು ಗ್ಯಾರಂಟಿಯಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್, ‘ಪ್ರಧಾನಿ ಮೋದಿ 2014ರಲ್ಲಿ ಭರವಸೆ, 2019ರಲ್ಲಿ ನಂಬಿಕೆಯೊಂದಿಗೆ ಆಯ್ಕೆಯಾಗಿದ್ದು, 2024ರಲ್ಲಿ ತಮ್ಮ ಗ್ಯಾರಂಟಿಗಳ ಮೂಲಕ ಆಯ್ಕೆಯಾಗುವುದಾಗಿ ತಿಳಿಸಿದ್ದಾರೆ.
ಆದರೆ 2014ರಲ್ಲಿ ಅವರು ನೀಡಿದ್ದ ಭರವಸೆಗಳನ್ನು ಈಡೇರಿಸದೆ ಹುಸಿಗೊಳಿಸಿದರು. 2019ರಲ್ಲಿ ಅವರ ಮೇಲೆ ಜನತೆ ಇಟ್ಟಿದ್ದ ನಂಬಿಕೆಗೆ ದ್ರೋಹಬಗೆದರು. ಹೀಗಾಗಿ ಅವರು 2024ರಲ್ಲಿ ನಿರ್ಗಮಿಸುವುದು ಗ್ಯಾರಂಟಿಯಾಗಿದೆ’ ಎಂದು ಕಿಡಿ ಕಾರಿದ್ದಾರೆ.