3 ರಾಷ್ಟ್ರಗಳ ಪ್ರವಾಸ ಆರಂಭಿಸಿರುವ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸೈಪ್ರಸ್‌ಗೆ ಆಮಿಸಿ ಅಧ್ಯಕ್ಷ ನಿಕೋಸ್ ಕ್ರಿಸ್ಟೋಡೌಲೈಡ್ಸ್‌ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

 ನಿಕೋಸಿಯಾ: 3 ರಾಷ್ಟ್ರಗಳ ಪ್ರವಾಸ ಆರಂಭಿಸಿರುವ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸೈಪ್ರಸ್‌ಗೆ ಆಮಿಸಿ ಅಧ್ಯಕ್ಷ ನಿಕೋಸ್ ಕ್ರಿಸ್ಟೋಡೌಲೈಡ್ಸ್‌ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. 

ಆಪರೇಷನ್‌ ಸಿಂದೂರದ ಬಳಿಕ ಮೊದಲ ವಿದೇಶ ಪ್ರವಾಸದಲ್ಲಿರುವ ಮೋದಿ ಸೈಪ್ರಸ್‌ ಬಳಿಕ ಕೆನಡಾ, ಕ್ರೊವೇಷಿಯಾಗೆ ಭೇಟಿ ನೀಡಲಿದ್ದಾರೆ. ಮೊದಲ ಭೇಟಿಯಾಗಿ ಸೈಪ್ರಸ್‌ಗೆ ತೆರಳಿದ್ದಾರೆ. ಎರಡು ದಶಕದ ಬಳಿಕ ಭಾರತ ಪ್ರಧಾನಿಯೊಬ್ಬರು ಸೈಪ್ರಸ್‌ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದ್ದು, ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಗೆ ಅಧ್ಯಕ್ಷರಿಂದ ಅದ್ಧೂರಿ ಸ್ವಾಗತ ದೊರೆಯಿತು.

ಈ ಬೆನ್ನಲ್ಲೇ ಸೈಪ್ರಸ್ ಭೇಟಿ ಬಗ್ಗೆ ಜಾಲತಾಣದಲ್ಲಿ ಬರೆದುಕೊಂಡಿರುವ ಮೋದಿ, ‘ ಈ ಭೇಟಿಯು ವ್ಯಾಪಾರ, ಹೂಡಿಕೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಭಾರತ ಮತ್ತು ಸೈಪ್ರಸ್‌ ನಡುವಿನ ಸಂಬಂಧವನ್ನು ವೃದ್ಧಿಸಲಿದೆ’ ಎಂದಿದ್ದಾರೆ.

4 ದಿನಗಳ ಕಾಲ ಮೂರು ದೇಶಗಳ ಪ್ರವಾಸದಲ್ಲಿರುವ ಮೋದಿ ಸೈಪ್ರಸ್‌ ಬಳಿಕ ಕೆನಡಾಗೆ ಭೇಟಿ ನೀಡಲಿದ್ದು, ಅಲ್ಲಿ ಜಿ7 ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಆ ಬಳಿಕ ಕ್ರೊವೇಷಿಯಾಗೆ ತೆರಳಲಿದ್ದಾರೆ.