ಸಾರಾಂಶ
ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ (ಪಿಒಕೆ) ಉಗ್ರ ಅಡಗುತಾಣಗಳ ಮೇಲೆ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂದೂರ್’ ಕುರಿತು ಮಾಹಿತಿ ನೀಡಿದರು.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ (ಪಿಒಕೆ) ಉಗ್ರ ಅಡಗುತಾಣಗಳ ಮೇಲೆ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂದೂರ್’ ಕುರಿತು ಮಾಹಿತಿ ನೀಡಿದರು.
‘ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿ ಮಾಡಿ ಆಪರೇಷನ್ ಸಿಂದೂರ್ ಬಗ್ಗೆ ವಿವರಿಸಿದರು’ ಎಂದು ರಾಷ್ಟ್ರಪತಿಗಳ ಕಚೇರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಭೇಟಿಯ ಚಿತ್ರಗಳನ್ನೂ ಹಂಚಿಕೊಂಡಿದೆ.