ದುಬೈನಲ್ಲಿ ವಾಸಿಸುವ ಕನ್ನಡ ಕುಟುಂಬಗಳು ತಮ್ಮ ಮಕ್ಕಳಿಗೆ ಕನ್ನಡ ಭಾಷೆ ಕಲಿಸಲು ‘ಕನ್ನಡ ಪಾಠಶಾಲೆ’ ಮೂಲಕ ಮಾಡುತ್ತಿರುವ ಪ್ರಯತ್ನಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.
ನವದೆಹಲಿ : ದುಬೈನಲ್ಲಿ ವಾಸಿಸುವ ಕನ್ನಡ ಕುಟುಂಬಗಳು ತಮ್ಮ ಮಕ್ಕಳಿಗೆ ಕನ್ನಡ ಭಾಷೆ ಕಲಿಸಲು ‘ಕನ್ನಡ ಪಾಠಶಾಲೆ’ ಮೂಲಕ ಮಾಡುತ್ತಿರುವ ಪ್ರಯತ್ನಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಈ ಮೂಲಕ ಭಾರತದಿಂದ ಭಾರತದಿಂದ ಸಾವಿರಾರು ಕಿ.ಮೀ. ದೂರದಲ್ಲಿರುವ ವಿದೇಶಗಳಲ್ಲಿ ವಾಸಿಸುವ ಭಾರತೀಯರು ತಮ್ಮ ಬೇರುಗಳೊಂದಿಗೆ ಸಂಪರ್ಕದಲ್ಲಿರಲು ಹೇಗೆ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂಬುದನ್ನು ಎತ್ತಿ ತೋರಿಸಿದ್ದಾರೆ.
‘ಮಾಸಿಕ ಮನ್ ಕೀ ಬಾತ್’ನಲ್ಲಿ ಭಾಷಣ
ಈ ಶಾಲೆಯನ್ನು 2014ರಲ್ಲೇ ಕನ್ನಡಿಗ ಉದ್ಯಮಿ ಶಶಿಧರ ನಾಗರಾಜಪ್ಪ ಹಾಗೂ ಅವರ ಸ್ನೇಹಿತರು ಆರಂಭಿಸಿದ್ದರು. ಇದನ್ನು ಪ್ರಸ್ತಾಪಿಸಿ ಭಾನುವಾರ ಆಕಾಶವಾಣಿಯಲ್ಲಿ ತಮ್ಮ ‘ಮಾಸಿಕ ಮನ್ ಕೀ ಬಾತ್’ನಲ್ಲಿ ಭಾಷಣ ಮಾಡಿದ ಮೋದಿ, ‘ದುಬೈನಲ್ಲಿ ವಾಸಿಸುವ ಕನ್ನಡ ಕುಟುಂಬಗಳು ತಮ್ಮನ್ನು ತಾವು ಒಂದು ಪ್ರಮುಖ ಪ್ರಶ್ನೆಯನ್ನು ಕೇಳಿಕೊಂಡವು: ನಮ್ಮ ಮಕ್ಕಳು ತಂತ್ರಜ್ಞಾನ ಜಗತ್ತಿನಲ್ಲಿ ಮುಂದುವರಿಯುತ್ತಿದ್ದಾರೆ, ಆದರೆ ಅವರು ತಮ್ಮ ಭಾಷೆಯಿಂದ ದೂರ ಸರಿಯುತ್ತಿಲ್ಲವೇ? ಎಂಬುದೇ ಆ ಪ್ರಶ್ನೆಯಾಗಿತ್ತು. ಆಗ ಜನ್ಮತಳೆದಿದ್ದೇ ‘ಕನ್ನಡ ಪಾಠಶಾಲೆ’. ಮಕ್ಕಳಿಗೆ ಕನ್ನಡ ಕಲಿಸಲು, ಕಲಿಯಲು, ಬರೆಯಲು ಮತ್ತು ಮಾತನಾಡಲು ಕಲಿಸುವ ಒಂದು ಉಪಕ್ರಮ ಇದಾಗಿತ್ತು. ಇಂದು, ಸಾವಿರಕ್ಕೂ ಹೆಚ್ಚು ಮಕ್ಕಳು ಇಲ್ಲಿ ಕನ್ನಡ ಕಲಿಯುತ್ತಿದ್ದಾರೆ. ನಿಜಕ್ಕೂ, ಕನ್ನಡ ನಾಡು, ನುಡಿ ನಮ್ಮ ಹೆಮ್ಮೆ. ಕನ್ನಡದ ಭೂಮಿ ಮತ್ತು ಭಾಷೆ ನಮ್ಮ ಹೆಮ್ಮೆಯಾಗಿದೆ’ ಎಂದರು.
‘ನಮ್ಮ ಬೇರುಗಳೊಂದಿಗೆ ಸಂಪರ್ಕ ಉಳಿಸಿಕೊಳ್ಳುವಂತಹ ಈ ಪ್ರಯತ್ನ ಭಾರತಕ್ಕೆ ಸೀಮಿತವಾಗಿಲ್ಲ. ಪ್ರಪಂಚದ ವಿವಿಧೆಡೆ ವಾಸಿಸುವ ಭಾರತೀಯರು ಸಹ ತಮ್ಮ ತಮ್ಮ ಪ್ರಯತ್ನದಲ್ಲಿ ತೊಡಗಿದ್ದಾರೆ’ ಎಂದು ಶ್ಲಾಘಿಸಿದರು.
ಪರ್ವ ಗ್ರೂಪ್‌ನ ಶಶಿಧರ್ ಸ್ಥಾಪಿಸಿದ್ದ ಕನ್ನಡ ಶಾಲೆ
2014ರಲ್ಲಿ ಶಾಲೆ ಶುರು । 1000 ಮಕ್ಕಳಿಂದ ಕಲಿಕೆನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್‌ನಲ್ಲಿ ದುಬೈನ ‘ಕನ್ನಡ ಪಾಠಶಾಲೆ’ ಬಗ್ಗೆ ಪ್ರಶಂಸಿಸಿದ್ದಾರೆ. ಈ ಕನ್ನಡ ಪಾಠಶಾಲೆಯನ್ನು ಆಂಭವಾಗಿದ್ದು 2014ರಲ್ಲಿ. ಅಂದಿನಿಂದ ಇದು ಅಲ್ಲಿ ಕನ್ನಡ ಕಾಯಕ ಮಾಡುತ್ತಿದೆ. 2014ರಲ್ಲಿ ದುಬೈನಲ್ಲಿದ್ದ ಕನ್ನಡಿಗ ಉದ್ಯಮಿ ಶಶಿಧರ ನಾಗರಾಜಪ್ಪ ಹಾಗೂ ಸ್ನೇಹಿತರು, ‘ಅಲ್ಲಿನ ಕರ್ನಾಟಕ ಮೂಲದ ಮಕ್ಕಳಿಗೆ ಮಾತೃಭಾಷೆ ಕನ್ನಡದ ಜ್ಞಾನದ ಕೊರತೆ ಇದೆ. ಇದು ದುಃಖಕರ ವಿಚಾರ. ಕನ್ನಡ ನಮ್ಮ ಭಾಷೆಯಷ್ಟೇ ಅಲ್ಲ, ಸಂಸ್ಕೃತಿ ಕೂಡ. ಅದನ್ನು ಉಳಿಸಬೇಕು’ ಎಂದು ಚರ್ಚಿಸುತ್ತಿದ್ದರು. ಈ ವೇಳೆ ಹೊಳೆದಿದ್ದೇ ಕನ್ನಡ ಪಾಠಶಾಲೆಯ ಕಲ್ಪನೆ.