ಸಾರಾಂಶ
ಈ ತಿಂಗಳ 14ರಂದು ಕರ್ನಾಟಕದಲ್ಲಿ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರವಾಸದಲ್ಲಿ ಕೊಂಚ ಮಾರ್ಪಾಟಾಗಿದೆ
ಬೆಂಗಳೂರು: ಈ ತಿಂಗಳ 14ರಂದು ಕರ್ನಾಟಕದಲ್ಲಿ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರವಾಸದಲ್ಲಿ ಕೊಂಚ ಮಾರ್ಪಾಟಾಗಿದೆ.ಮೊದಲ ಹಂತದ ಲೋಕಸಭಾ ಚುನಾವಣೆಗೆ ಬಿಜೆಪಿ ಪರ ಪ್ರಚಾರ ಕೈಗೊಳ್ಳುವ ಉದ್ದೇಶದಿಂದ ಪ್ರಧಾನಿ ಮೋದಿ ಅವರು ರಾಜ್ಯದಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಮೈಸೂರು ಮತ್ತು ಮಂಗಳೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ.
ಈ ಮೊದಲು ಬೆಂಗಳೂರಿನಲ್ಲಿ ಕಾರ್ಯಕ್ರಮ ಎಂದು ಹೇಳಲಾಗಿತ್ತು. ಇದೀಗ ಅದನ್ನು ಮೈಸೂರಿಗೆ ಸ್ಥಳಾಂತರಗೊಂಡಿದೆ. ಬೆಂಗಳೂರಿನಲ್ಲಿ ಈ ತಿಂಗಳ 19ರಂದು ಮೋದಿ ಅವರು ಸಮಾವೇಶದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
14ರಂದು ಮೈಸೂರಿನಲ್ಲಿ ಸಂಜೆ 4 ಗಂಟೆಗೆ ಮೋದಿ ಅವರು ಮಹಾರಾಜ ಕಾಲೇಜು ಮೈದಾನದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳ ಕಾರ್ಯಕರ್ತರ ಮತ್ತು ಸಾರ್ವಜನಿಕರ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಅದೇ ದಿನ ಸಂಜೆ ಸಂಜೆ 6 ಗಂಟೆಗೆ ಮಂಗಳೂರಿನಲ್ಲಿ ನಾರಾಯಣಗುರು ವೃತ್ತದಿಂದ ನವಭಾರತ್ ವೃತ್ತದವರೆಗೆ ಮೋದಿ ಅವರು ಒಂದೂವರೆ ಕಿ.ಮೀ. ರೋಡ್ ಶೋ ನಡೆಸಲಿದ್ದಾರೆ.
ಈ ಎರಡೂ ಕಾರ್ಯಕ್ರಮಗಳ ಯಶಸ್ಸಿಗೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ಬಿಜೆಪಿಯ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಹಾಗೂ ಶಾಸಕ ವಿ.ಸುನೀಲ್‌ಕುಮಾರ್ ತಿಳಿಸಿದ್ದಾರೆ.