ಸಾರಾಂಶ
ಪ್ರಧಾನಿ ನರೇಂದ್ರ ಮೋದಿ ಅವರು ಇದೇ ತಿಂಗಳ 24ರಂದು ಬಿಹಾರದಲ್ಲಿ ತಮ್ಮ ಚುನಾವಣಾ ಪ್ರಚಾರವನ್ನು ಆರಂಭಿಸಲಿದ್ದು, ಚುನಾವಣೆ ಘೋಷಣೆ ನಂತರ ಮೊದಲ ಬಾರಿ ರಣಕಹಳೆ ಮೊಳಗಿಸಲಿದ್ದಾರೆ. ಅಂದು ಬೆಳಗ್ಗೆ ಸಮಷ್ಟಿಪುರದಿಂದ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಪಟನಾ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ತಿಂಗಳ 24ರಂದು ಬಿಹಾರದಲ್ಲಿ ತಮ್ಮ ಚುನಾವಣಾ ಪ್ರಚಾರವನ್ನು ಆರಂಭಿಸಲಿದ್ದು, ಚುನಾವಣೆ ಘೋಷಣೆ ನಂತರ ಮೊದಲ ಬಾರಿ ರಣಕಹಳೆ ಮೊಳಗಿಸಲಿದ್ದಾರೆ.
ಅಂದು ಬೆಳಗ್ಗೆ ಸಮಷ್ಟಿಪುರದಿಂದ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಅದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಭಾರತ ರತ್ನ ಕರ್ಪೂರಿ ಠಾಕೂರ್ ಅವರ ಗ್ರಾಮಕ್ಕೆ ಭೇಟಿ ಕೊಡಲಿದ್ದಾರೆ. ಬಳಿಕ ಮಧ್ಯಾಹ್ನ ಬೇಗುಸರಾಯ್‌ಗೆ ತೆರಳಲಿದ್ದಾರೆ ಎಂದು ಬಿಜೆಪಿ ಬಿಹಾರ ಅಧ್ಯಕ್ಷ ದಿಲೀಪ್ ಜೈಸ್ವಾಲ್ ತಿಳಿಸಿದ್ದಾರೆ.24ರ ಬಳಿಕ 30ರಂದು ಮತ್ತೆ ಬಿಹಾರಕ್ಕೆ ಮೋದಿ ಆಗಮಿಸಲಿದ್ದು, ಮುಜಫ್ಫರ್‌ಪುರದಲ್ಲಿ ಸಮಾವೇಶ ನಡೆಸಲಿದ್ದಾರೆ. ನಂತರದಲ್ಲಿ ನ.2, 3, 6 ಮತ್ತು 7ರಂದು ಸಹ ಬಿಹಾರಕ್ಕೆ ಬರಲಿದ್ದಾರೆ.