ಫೆ.10ರಿಂದ ಫ್ರಾನ್ಸ್‌ ಮತ್ತು ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

| N/A | Published : Feb 08 2025, 12:31 AM IST / Updated: Feb 08 2025, 07:04 AM IST

PM Narendra Modi Speech in Rajya Sabha

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಫೆ.10ರಿಂದ ಫ್ರಾನ್ಸ್‌ ಮತ್ತು ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಫೆ.10ರಿಂದ ಫ್ರಾನ್ಸ್‌ ಮತ್ತು ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.

‘ಫೆ.10 -12ರವರೆಗೆ ಮೋದಿ ಫ್ರಾನ್ಸ್‌ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ಯಾರಿಸ್‌ನಲ್ಲಿ ನಡೆಯುವ ಕೃತಕ ಬುದ್ಧಿಮತ್ತೆ ಕುರಿತ ಜಾಗತಿಕ ಸಮ್ಮೇಳನದಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ, ಅಧ್ಯಕ್ಷ ಎಮ್ಯಾನುವೆಲ್ ಮ್ಯಾಕ್ರನ್ ಜೊತೆಗೆ ದ್ವಿಪಕ್ಷೀಯ ಮಾತುಕತೆಯನ್ನೂ ನಡೆಲಿಸದ್ದಾರೆ. ಜೊತೆಗೆ ಭಾರತ ಪಾಲುದಾರರಾಗಿರುವ ಥರ್ಮೋನ್ಯೂಕ್ಲಿಯರ್‌ ಪ್ರಾಯೋಗಿಕ ರಿಯಾಕ್ಟರ್‌ನ ಸ್ಥಳವಾದ ಕ್ಯಾಡರಾಚೆಗೆ ಭೇಟಿ ನೀಡಲಿದ್ದಾರೆ. ಅಲ್ಲದೆ ಈ ಭೇಟಿ ವೇಳೆ ಫ್ರಾನ್ಸ್‌ನಿಂದ ನೌಕಾ ಮಾದರಿಯ ರಫೇಲ್‌ ಯುದ್ಧ ವಿಮಾನ ಖರೀದಿಗೂ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ.

ಫ್ರಾನ್ಸ್‌ನಿಂದ ನೇರವಾಗಿ ಅಮೆರಿಕಕ್ಕೆ ತೆರಳಲಿರುವ ಪ್ರಧಾನಿ ಮೋದಿ ಫೆ.12-13ಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ನೂತನ ಅಧ್ಯಕ್ಷ ಡೊನಾಲ್ಡ್ರ್ ಟ್ರಂಪ್‌ ಅವರನ್ನು ಭೇಟಿ ಮಾತುಕತೆ ನಡೆಸಿದ್ದಾರೆ.