ಫೆ.13ರಂದು ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ಮಾಡುವ ನಿರೀಕ್ಷೆ

| N/A | Published : Feb 04 2025, 12:30 AM IST / Updated: Feb 04 2025, 03:58 AM IST

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಫೆ.13ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಒಂದು ವೇಳೆ ಇದು ಖಚಿತವಾದರೆ ಡೊನಾಲ್ಡ್‌ ಟ್ರಂಪ್‌ ಅವರ 2ನೇ ಅಧ್ಯಕ್ಷೀಯ ಅವಧಿಯಲ್ಲಿ ಇದು ಉಭಯ ನಾಯಕರ ಮೊದಲ ಭೇಟಿಯಾಗಿರಲಿದೆ.

ವಾಷಿಂಗ್ಟನ್‌: ಪ್ರಧಾನಿ ನರೇಂದ್ರ ಮೋದಿ ಫೆ.13ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಒಂದು ವೇಳೆ ಇದು ಖಚಿತವಾದರೆ ಡೊನಾಲ್ಡ್‌ ಟ್ರಂಪ್‌ ಅವರ 2ನೇ ಅಧ್ಯಕ್ಷೀಯ ಅವಧಿಯಲ್ಲಿ ಇದು ಉಭಯ ನಾಯಕರ ಮೊದಲ ಭೇಟಿಯಾಗಿರಲಿದೆ.

ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ನಲ್ಲಿ ಫೆ.10-11ರಂದು ಕೃತಕ ಬುದ್ಧಿಮತ್ತೆ ಕುರಿತ ಜಾಗತಿಕ ಸಮ್ಮೇಳನ ನಡೆಯಲಿದೆ. ಅದರಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ, ಅಲ್ಲಿಂದ ನೇರವಾಗಿ ಅಮೆರಿಕಕ್ಕೆ 3 ದಿನಗಳ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

ಈ ಭೇಟಿ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು ಅಮೆರಿಕದ ಹಲವು ಉದ್ಯಮಿಗಳನ್ನು ಮೋದಿ ಭೇಟಿಯಾಗಲಿದ್ದಾರೆ. ಜೊತೆಗೆ ಭಾರತೀಯ ಸಮುದಾಯದವರ ಜೊತೆಗೆ ಸಂವಾದದ ಕಾರ್ಯಕ್ರಮವೂ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.