ಸಾರಾಂಶ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 21ನೇ ಆಸಿಯಾನ್-ಭಾರತ ಶೃಂಗಸಭೆ ಹಾಗೂ 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲು ಅ.10-11ರಂದು ಲಾವೋಸ್‌ಗೆ ತೆರಳಲಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 21ನೇ ಆಸಿಯಾನ್-ಭಾರತ ಶೃಂಗಸಭೆ ಹಾಗೂ 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲು ಅ.10-11ರಂದು ಲಾವೋಸ್‌ಗೆ ತೆರಳಲಿದ್ದಾರೆ.
ಪ್ರಸ್ತುತ ಆಸಿಯಾನ್‌ನ ಅಧ್ಯಕ್ಷ ದೇಶವಾಗಿರುವ ಲಾವೋಸ್ ಪ್ರಧಾನಿ ಸೋನೆಕ್ಸೆ ಸಿಫಾಂಡೋನ್ ಆಹ್ವಾನದ ಮೇರೆಗೆ ಮೋದಿ ರಾಜಧಾನಿ ವಿಯೆಂಟಿಯಾನ್‌ಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ. ಈ ವೇಳೆ ಅವರು ದ್ವಿಪಕ್ಷೀಯ ಸಭೆಗಳನ್ನು ನಡೆಸುವ ನಿರೀಕ್ಷೆಯಿದೆ.‘ಆಸಿಯಾನ್-ಭಾರತ ಶೃಂಗಸಭೆಯಲ್ಲಿ ದೇಶಗಳು ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಮೂಲಕ ತಮ್ಮ ಸಂಬಂಧದ ಪ್ರಗತಿಯನ್ನು ಪರಿಶೀಲಿಸಿಕೊಂಡು ಭವಿಷ್ಯದಲ್ಲಿ ಸಹಕಾರದ ಕುರಿತು ನಿರ್ಧರಿಸಲಿವೆ. ಅಂತೆಯೇ ಪೂರ್ವ ಏಷ್ಯಾ ಶೃಂಗಸಭೆಯು ಈ ಪ್ರದೇಶದಲ್ಲಿ ಪರಸ್ಪರ ನಂಬಿಕೆಯ ವಾತಾವರಣವನ್ನು ನಿರ್ಮಿಸುವಲ್ಲಿ ಸಹಕಾರಿಯಾಗಿದ್ದು, ಭಾರತ ಸೇರಿದಂತೆ ಇತರೆ ಸದಸ್ಯ ರಾಷ್ಟ್ರಗಳಿಗೆ ಸ್ಥಳೀಯ ಸಮಸ್ಯೆಗಳ ಕುರಿತು ನಿಲುವುಗಳನ್ನು ಹಂಚಿಕೊಳ್ಳಲು ಅವಕಾಶ ನೀಡುತ್ತದೆ’ ಎಂದು ಇಲಾಖೆ ತಿಳಿಸಿದೆ.