ಸಾರಾಂಶ
ಪ್ರಧಾನಿ ನರೇಂದ್ರ ಮೋದಿ ಭಾನುವಾರ ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಮುಖ್ಯ ಕಚೇರಿಗೆ ಭಾನುವಾರ ಭೇಟಿ ನೀಡಲಿದ್ದಾರೆ. ಪ್ರಧಾನಿಯೊಬ್ಬರು ಸಂಘದ ಕಚೇರಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲು.
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಮುಖ್ಯ ಕಚೇರಿಗೆ ಭಾನುವಾರ ಭೇಟಿ ನೀಡಲಿದ್ದಾರೆ. ಪ್ರಧಾನಿಯೊಬ್ಬರು ಸಂಘದ ಕಚೇರಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲು.
ಈ ವೇಳೆ ಅಲ್ಲಿನ ಸ್ಮೃತಿ ಮಂದಿರದಲ್ಲಿ ಆರ್‌ಎಸ್‌ಎಸ್ ಸಂಸ್ಥಾಪಕ ಡಾ. ಕೆ.ಬಿ. ಹೆಡಗೇವಾರ್ ಹಾಗೂ 2ನೇ ಸರಸಂಘಚಾಲಕ ಗುರೂಜಿ ಗೋಳವಲಕರ್ ಅವರ ಸ್ಮಾರಕಕ್ಕೆ ಗೌರವ ಸಲ್ಲಿಸಲಿದ್ದಾರೆ. ಅಂದೇ ಆರ್‌ಎಸ್‌ಎಸ್‌ನ ಬಹುಮುಖ್ಯವಾದ ಯುಗಾದಿ ಸಂಭ್ರಮ ನಡೆಯಲಿದ್ದು, ಅದರಲ್ಲಿ ಭಾಗಿಯಾಗಲಿದ್ದಾರೆ.ಆ ಬಳಿಕ ಪ್ರಧಾನಿ, 1956ರಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಬೌದ್ಧ ದೀಕ್ಷೆ ಸ್ವೀಕರಿಸಿದ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ. ಮಾಧವ ನೇತ್ರಾಲಯ ಕಣ್ಣಿನ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ನವೀನ ವಿಸ್ತೃತ ಕಟ್ಟಡವಾದ ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.