ಪೂಂಛ್ ಉಗ್ರರ ಸುಳಿವಿತ್ತರೆ 20 ಲಕ್ಷ ರು. ಇನಾಮು

| Published : May 07 2024, 01:07 AM IST / Updated: May 07 2024, 06:07 AM IST

ಸಾರಾಂಶ

ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪೂಂಛ್‌ನಲ್ಲಿ ವಾಯುಪಡೆ ಯೋಧರ ಮೇಲೆ ದಾಳಿ ಮಾಡಿದ ಪಾಕಿಸ್ತಾನಿ ಉಗ್ರರ ರೇಖಾಚಿತ್ರವನ್ನು ಭದ್ರತಾ ಪಡೆ ಸೋಮವಾರ ಬಿಡುಗಡೆ ಮಾಡಿದ್ದು, ಅವರ ಸುಳಿವು ನೀಡಿದವರಿಗೆ 20 ಲಕ್ಷ ರು. ಬಹುಮಾನ ನೀಡುವುದಾಗಿ ಪ್ರಕಟಿಸಿದೆ.

ಜಮ್ಮು: ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪೂಂಛ್‌ನಲ್ಲಿ ವಾಯುಪಡೆ ಯೋಧರ ಮೇಲೆ ದಾಳಿ ಮಾಡಿದ ಪಾಕಿಸ್ತಾನಿ ಉಗ್ರರ ರೇಖಾಚಿತ್ರವನ್ನು ಭದ್ರತಾ ಪಡೆ ಸೋಮವಾರ ಬಿಡುಗಡೆ ಮಾಡಿದ್ದು, ಅವರ ಸುಳಿವು ನೀಡಿದವರಿಗೆ 20 ಲಕ್ಷ ರು. ಬಹುಮಾನ ನೀಡುವುದಾಗಿ ಪ್ರಕಟಿಸಿದೆ.

ಉಗ್ರರ ಪತ್ತೆಗೆ ಭದ್ರತಾ ಪಡೆ ಶೋಧ ಕಾರ್ಯ ಮುಂದುವರಿಸಿದ್ದು, ಅದರ ಭಾಗವಾಗಿ ರೇಖಾಚಿತ್ರ ಪ್ರಕಟಿಸಿ ಇನಾಮು ಘೋಷಿಸಿದೆ.

ಶನಿವಾರ ಸಂಜೆ ಪೂಂಛ್‌ನ ಶಾಸಿತಾರ್ ಬಳಿ ಭಾರತೀಯ ವಾಯುಪಡೆಯ ಮೇಲೆ ಪಾಕಿಸ್ತಾನಿ ಉಗ್ರರು ಹೊಂಚು ದಾಳಿ ಮಾಡಿದ್ದು, ವಾಯುಪಡೆ ಯೋಧ ವಿಕ್ಕಿ ಪಹಾಡೆ ಹುತಾತ್ಮರಾಗಿದ್ದರು. ಇತರ ನಾಲ್ವರು ಯೋಧರು ಗಾಯಗೊಂಡಿದ್ದರು.