ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತಂತ್ರ ರೂಪಿಸುವ ಭಾಗವಾಗಿ, ರಾಜಕೀಯ ತಂತ್ರಗಾರ ಹಾಗೂ ಜನ್ ಸುರಾಜ್ ಪಕ್ಷದ ಸ್ಥಾಪಕ ಪ್ರಶಾಂತ್ ಕಿಶೋರ್ ಅವರು ನಟ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ(ಟಿವಿಕೆ)ಯ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.
ಚೆನ್ನೈ: ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತಂತ್ರ ರೂಪಿಸುವ ಭಾಗವಾಗಿ, ರಾಜಕೀಯ ತಂತ್ರಗಾರ ಹಾಗೂ ಜನ್ ಸುರಾಜ್ ಪಕ್ಷದ ಸ್ಥಾಪಕ ಪ್ರಶಾಂತ್ ಕಿಶೋರ್ ಅವರು ನಟ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ(ಟಿವಿಕೆ)ಯ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.
ಈ ವೇಳೆ, ರಾಜ್ಯದಲ್ಲಿ ರಾಜಕೀಯ ವಾತಾವರಣ, ಸಶಕ್ತ ಪಕ್ಷಗಳೊಂದಿಗಿನ ಮೈತ್ರಿ ಸಾಧ್ಯತೆ, ಸದ್ಯ ಪಕ್ಷದ ರಚನೆ ಹಾಗೂ ಶ್ರೇಣಿ ವ್ಯವಸ್ಥೆಗಳಂತಹ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.
ತಮ್ಮ ಸ್ವಂತ ಪಕ್ಷ ಸ್ಥಾಪನೆಗೂ ಮುನ್ನ ಕಿಶೋರ್ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಹಾಗೂ ತೆಲಂಗಾಣದ ವೈಎಸ್‌ಆರ್ ಕಾಂಗ್ರೆಸ್‌ಗೆ ಚುನಾವಣಾ ತಂತ್ರ ರೂಪಿಸಿದ್ದರು.
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.