ಸಾರಾಂಶ
ರಾಮಮಂದಿರ ಪ್ರಾಣಪ್ರತಿಷ್ಠಾಪನೆಯಾದ ಬಳಿಕ ಮೊಟ್ಟಮೊದಲ ಬಾರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ ಅಯೋಧ್ಯೆಗೆ ಭೇಟಿ ನೀಡಿ ಬಾಲಕ ರಾಮನ ದರ್ಶನ ಪಡೆದರು.
ಅಯೋಧ್ಯೆ: ರಾಮಮಂದಿರ ಪ್ರಾಣಪ್ರತಿಷ್ಠಾಪನೆಯಾದ ಬಳಿಕ ಮೊಟ್ಟಮೊದಲ ಬಾರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ ಅಯೋಧ್ಯೆಗೆ ಭೇಟಿ ನೀಡಿ ಬಾಲಕ ರಾಮನ ದರ್ಶನ ಪಡೆದರು.
ಮೊದಲಿಗೆ ಹನುಮಾನ್‌ಗಢಿ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಾಷ್ಟ್ರಪತಿ ಬಳಿಕ ರಾಮಮಂದಿರ ಪ್ರವೇಶಿಸಿ ಗರ್ಭಗುಡಿಯಲ್ಲಿ ಮಂಡಿಯೂರಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಬಾಲಕರಾಮನಿಗೆ ಆರತಿ ಎತ್ತಿ ಪೂಜೆ ಸಲ್ಲಿಸಿದರು. ನಂತರದಲ್ಲಿ ಪವಿತ್ರ ಸರಯೂ ನದಿಯಲ್ಲಿ ನಡೆಯುವ ಆರತಿ ಪೂಜೆಯಲ್ಲಿ ಪಾಲ್ಗೊಂಡರು.
ವಿಪಕ್ಷಗಳಿಗೆ ಟಾಂಗ್: ಪ್ರಾಣಪ್ರತಿಷ್ಠಾಪನೆಯಾದ ದಿನದಿಂದಲೂ ಪ್ರತಿಪಕ್ಷಗಳು ದ್ರೌಪದಿ ಮುರ್ಮು ಆದಿವಾಸಿ ಸಮುದಾಯಕ್ಕೆ ಸೇರಿದ ಕಾರಣ ಅವರನ್ನು ರಾಮಮಂದಿರಕ್ಕೆ ಆಹ್ವಾನಿಸಿಲ್ಲ ಎಂದು ಟೀಕಿಸುತ್ತಿದ್ದವು.