ಸಾರಾಂಶ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಿದ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಮಂಗಳವಾರ ಸಂಜೆ 4 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸಲಿದ್ದಾರೆ.
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಿದ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಮಂಗಳವಾರ ಸಂಜೆ 4 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸಲಿದ್ದಾರೆ.
ಈ ಬಾರಿಯ ರಾಷ್ಟ್ರಪತಿ ಮುರ್ಮು ಅವರು ತುರ್ತು ಪರಿಸ್ಥಿತಿ, ದೇಶದ ಆರ್ಥಿಕತೆ, ಕೇಂದ್ರ ಸರ್ಕಾರದ ಸಾಧನೆಗಳ ಕುರಿತು ಮಾತನಾಡಿದ್ದರು. ಇದಕ್ಕೆ ಕಾಂಗ್ರೆಸ್ ಸೇರಿ ವಿಪಕ್ಷಗಳೆಲ್ಲವೂ ತೀವ್ರವಾಗಿ ತಮ್ಮ ಅಸಮಾಧಾನ ಹೊರಹಾಕಿವೆ. ಅಲ್ಲದೆ ಮೋದಿ ವಿರುದ್ಧ ಲೋಕಸಭೆ ವಿಪಕ್ಷ ರಾಹುಲ್ ಗಾಂಧಿ ಸೇರಿ ಅನೇಕರು ಚರ್ಚೆಯ ವೇಳೆ ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆಲ್ಲ ಮೋದಿ ಸವಿಸ್ತಾರ ಉತ್ತರ ನೀಡುವ ನಿರೀಕ್ಷೆಯಿದೆ.