ಸಾರಾಂಶ
ಜಲಂಧರ್ ಮಾಜಿ ಸಂಸದರ ಪತ್ನಿಯೂ ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ಬಿಜೆಪಿಗೆ ಶಾಕ್ ಕೊಟ್ಟಿದ್ದಾರೆ.
ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಈಗಾಗಲೇ ಆರು ಶಾಸಕರನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ಕಾಂಗ್ರೆಸ್‌ಗೆ ಲೋಕಸಭಾ ಚುನಾವಣೆಗೆ ಮುನ್ನ ಮತ್ತೊಂದು ಸಂಕಷ್ಟ ಎದುರಾಗಿದ್ದು, ಪ್ರಿಯಾಂಕಾ ಗಾಂಧಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ತೇಜಿಂದರ್ ಬಿಟ್ಟು, ಪಕ್ಷವನ್ನು ತೊರೆದು ಬಿಜೆಪಿ ಸೇರಿದ್ದಾರೆ.
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸಮ್ಮುಖದಲ್ಲಿ ಬಿಜೆಪಿಗೆ ಸೇರುವ ಮುನ್ನ ಕಾಂಗ್ರೆಸ್‌ಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ತಾವು ಪಕ್ಷದ ಪ್ರಾಥಮಿಕ ಸದಸ್ಯತ್ವದ ಜೊತೆಗೆ ಎಲ್ಲ ಪದಾಧಿಕಾರದ ಹುದ್ದೆಗಳಿಗೂ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಅಲ್ಲದೆ ಜಲಂಧರ್ ಮಾಜಿ ಸಂಸದ ಸಂತೋಖ್ ಚೌಧರಿ ಪತ್ನಿ ಕರಂಜಿತ್ ಚೌಧರಿ ಪತ್ನಿಯೂ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಇವರ ಪತಿ ಕೆಲವೇ ತಿಂಗಳ ಹಿಂದೆ ತೀರಿಕೊಂಡಿದ್ದರು.