ಸರ್ಕಾರಿ ಸ್ವಾಯತ್ತೆ ಸಂಸ್ಥೆಗಳನ್ನು ಕಾಂಗ್ರೆಸ್ ಸರ್ಕಾರ ನಿರ್ಲಕ್ಷಿಸಿದ್ದು, ನಮ್ಮ ಬಿಜೆಪಿ ಸರ್ಕಾರದ ಅಧಿಕಾರ ಅವಧಿಯಲ್ಲಿ ಅವುಗಳು ಚೇತರಿಕೆ ಕಂಡಿವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ತಿಳಿಸಿದ್ದಾರೆ.
ನವದೆಹಲಿ: ಸರ್ಕಾರಿ ಸ್ವಾಯತ್ತೆ ಸಂಸ್ಥೆಗಳನ್ನು ಕಾಂಗ್ರೆಸ್ ಸರ್ಕಾರ ನಿರ್ಲಕ್ಷಿಸಿದ್ದು, ನಮ್ಮ ಬಿಜೆಪಿ ಸರ್ಕಾರದ ಅಧಿಕಾರ ಅವಧಿಯಲ್ಲಿ ಅವುಗಳು ಚೇತರಿಕೆ ಕಂಡಿವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ತಿಳಿಸಿದ್ದಾರೆ.
ಬಿಜೆಪಿ ಅವಧಿಯಲ್ಲಿ ಸರ್ಕಾರಿ ಸ್ವಾಯತ್ತೆ ಸಂಸ್ಥೆಗಳು ಹೀನಾಯಸ್ಥಿತಿಗೆ ತಲುಪಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಆರೋಪಿಸಿದ ಬೆನ್ನಲ್ಲೇ ಅದಕ್ಕೆ ಉತ್ತರ ನೀಡಿದ್ದಾರೆ.
ಸರ್ಕಾರಿ ಸ್ವಾಯತ್ತೆ ಸಂಸ್ಥೆಯಾದ ಹಿಂದೂಸ್ತಾನ್ ಏರೋನಾಟಿಕ್ ಲಿಮಿಟೆಡ್ (ಎಚ್‌ಎಎಲ್) ಸೇರಿದಂತೆ ಅನೇಕ ಸಂಸ್ಥೆಗಳನ್ನು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ನಿರ್ಲಕ್ಷಿಸಿದ್ದರು. ಆದರೆ ಮೋದಿ ಅಧಿಕಾರದಲ್ಲಿ ಇವುಗಳೆಲ್ಲವು ಚೇತರಿಕಂಡಿವೆ ಎಂದು ನಿರ್ಮಲಾ ಹೇಳಿದ್ದಾರೆ.
4 ವರ್ಷದಲ್ಲಿ ಎಚ್‌ಎಲ್‌ನ ಮಾರುಕಟ್ಟೆ ಮೌಲ್ಯ ಶೇ. 1370 ರಷ್ಟು ಏರಿಕೆ ಕಂಡಿದೆ. ಅದರಲ್ಲೂ 2020ರಲ್ಲಿ ಅದರ ಆದಾಯ 17,398 ಕೋಟಿ ರು. ನಷ್ಟಿದ್ದು, 2024ರಲ್ಲಿ 2.5 ಲಕ್ಷ ಕೋಟಿ ರು. ಗೆ ಏರಿಕೆ ಕಂಡಿದೆ. 2023-24ರ ಆರ್ಥಿಕ ವರ್ಷದಲ್ಲಿ ಎಚ್‌ಎಎಲ್ ಸುಮಾರು 29,810 ಕೋಟಿ ರು. ಅತ್ಯಧಿಕ ಆದಾಯವನ್ನು ಗಳಿಸಿದೆ ಎಂದು ತಿಳಿಸಿದ್ದಾರೆ.
ಮೋದಿ ಸರ್ಕಾರ ಪ್ರಮುಖವಾಗಿ ಭಾರತವನ್ನು ಇಂದು ಶಸ್ತ್ರಾಸ್ತ್ರಗಳ ರಫ್ತು ಮಾಡುವ ದೇಶವನ್ನಾಗಿ ಬದಲಾಯಿಸಿದೆ ಎಂದು ಹೇಳಿದ್ದಾರೆ.