ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್‌ ಅವಹೇಳನ : ರಾಹುಲ್‌ ಗಾಂಧಿಗೆ ಜಾಮೀನು

| Published : Jan 11 2025, 12:46 AM IST / Updated: Jan 11 2025, 04:38 AM IST

Rahul Gandhi photo

ಸಾರಾಂಶ

ಪುಣೆ: ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್‌ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣ ಎದುರಿಸುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಗೆ ಇಲ್ಲಿನ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ನೀಡಿದೆ.

ಪುಣೆ: ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್‌ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣ ಎದುರಿಸುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಗೆ ಇಲ್ಲಿನ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ನೀಡಿದೆ.

ಅರ್ಜಿ ವಿಚಾರಣೆ ವೇಳೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಹಾಜರಾದ ಗಾಂಧಿ ಅವರಿಗೆ 25,000 ರು. ಬಾಂಡ್‌ ಮೇಲೆ ನ್ಯಾಯಾಲಯ ಜಾಮೀನು ನೀಡಿದೆ. ಜೊತೆಗೆ ಪ್ರಕರಣ ಪೂರ್ತಿ ಖುದ್ದು ಹಾಜರಾಗುವುದರಿಂದ ಮುಕ್ತಿ ನೀಡಿದೆ. ಮುಂದಿನ ವಿಚಾರಣೆಯನ್ನು ಫೆ.18ಕ್ಕೆ ಮುಂದೂಡಿದೆ.

2023ರಲ್ಲಿ ಲಂಡನ್‌ ಪ್ರವಾಸದ ವೇಳೆ ರಾಹುಲ್‌ ಗಾಂಧಿ ಸಾವರ್ಕರ್‌ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ಸಾವರ್ಕರ್‌ ಅವರ ಮೊಮ್ಮಗ ಪ್ರಕರಣ ದಾಖಲಿಸಿದ್ದರು.