ಸಾರಾಂಶ
ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಧಾಕೃಷ್ಣನ್ ಅವರಿಗೆ ಪ್ರಮಾಣವಚನ ಬೋಧಿಸಿದರು.
ನವದೆಹಲಿ : ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಧಾಕೃಷ್ಣನ್ ಅವರಿಗೆ ಪ್ರಮಾಣವಚನ ಬೋಧಿಸಿದರು.
ಪ್ರಮಾಣ ವಚನ ಸ್ವೀಕರಿಸಿದ ರಾಧಾಕೃಷ್ಣನ್, ರಾಜ್ಯಸಭೆಯ ಅಧ್ಯಕ್ಷರಾಗಿಯೂ ಅಧಿಕಾರ ವಹಿಸಿಕೊಂಡರು. ನಂತರ ಸಂಸತ್ ಭವನದ ಪ್ರೇರಣಾ ಸ್ಥಳದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಾಮಾಜಿಕ ಹರಿಕಾರರ ಪುತ್ಥಳಿಗಳಿಗೆ ಪುಷ್ಪನಮನ ಸಲ್ಲಿಸಿದರು. ಸಂಸತ್ ಭವನದ ಸಂಕೀರ್ಣದಲ್ಲಿ ಸಸಿ ನೆಟ್ಟು, ಆ ಬಳಿಕ ರಾಜ್ಯಸಭಾ ಅಧ್ಯಕ್ಷರ ಕಚೇರಿಗೆ ತೆರಳಿ ಕಾಗದಪತ್ರಗಳಿಗೆ ಸಹಿ ಹಾಕಿದರು.
ಧನಕರ್ ಪ್ರತ್ಯಕ್ಷ
ರಾಧಾಕೃಷ್ಣನ್ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ನಿಕಟಪೂರ್ವ ಉಪರಾಷ್ಟ್ರಪತಿ ಜಗದೀಪ್ ಧನಕರ್ ಉಪಸ್ಥಿತರಿದ್ದರು. ಉಪರಾಷ್ಟ್ರಪತಿ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದ ಬಳಿಕ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು ಇದೇ ಮೊದಲು.