ಸಾರಾಂಶ
ಪ್ರವಾದಿ ಮೊಹಮ್ಮದರ ಬಗ್ಗೆ ವಿವಾದಿತ ಹೇಳಿಕೆ ನೀಡಿ ಪಕ್ಷದಿಂದ ಅಮಾನತಾಗಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.
ನವದೆಹಲಿ: ಪ್ರವಾದಿ ಮೊಹಮ್ಮದರ ಬಗ್ಗೆ ವಿವಾದಿತ ಹೇಳಿಕೆ ನೀಡಿ ಪಕ್ಷದಿಂದ ಅಮಾನತಾಗಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎನ್ನಲಾದ ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ಅವರನ್ನು ಬಿಜೆಪಿ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಕೆಲವು ಮಾಧ್ಯಮ ವರದಿಗಳು ಹೇಳಿವೆ.
ನೂಪುರ್ ಶರ್ಮಾ ಈ ಹಿಂದೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಸೋತಿದ್ದರು.
ಟಿವಿ ಕಾರ್ಯಕ್ರಮವೊಂದರಲ್ಲಿ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತಾಗಿದ್ದರು. ಈಗ ಅವರ ಅಮಾನತು ರದ್ದು ಮಾಡಿ ಕಣಕ್ಕಿಳಿಸುವ ಊಹಾಪೋಹ ಹರಡಿದೆ.