ಸಾರಾಂಶ
ಭೂಕುಸಿತ ದುರಂತ ಸಂಭವಿಸಿರುವ ಕೇರಳದ ವಯನಾಡಿಗೆ, ಕ್ಷೇತ್ರದ ಹಿಂದಿನ ಸಂಸದ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ವಯನಾಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗುರುವಾರ ಭೇಟಿ ನೀಡಲಿದ್ದಾರೆ.
ನವದೆಹಲಿ: ಭೂಕುಸಿತ ದುರಂತ ಸಂಭವಿಸಿರುವ ಕೇರಳದ ವಯನಾಡಿಗೆ, ಕ್ಷೇತ್ರದ ಹಿಂದಿನ ಸಂಸದ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ವಯನಾಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗುರುವಾರ ಭೇಟಿ ನೀಡಲಿದ್ದಾರೆ.
ಪ್ರತಿಕೂಲ ಹವಾಮಾನ ಕಾರಣ ಹೆಲಿಕಾಪ್ಟರ್ ಲ್ಯಾಂಡಿಂಗ್ ಅಸಾಧ್ಯ ಎಂದು ಕೇರಳದ ಅಧಿಕಾರಿಗಳು ತಿಳಿಸಿರುವ ಕಾರಣ ಬುಧವಾರ ಗಾಂಧಿದ್ವಯರು ತಮ್ಮ ಭೇಟಿಯನ್ನು ಮುಂದೂಡಿದ್ದರು.
ಈ ನಡುವೆ ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂತ್ರಸ್ತರಾದ ಜನರಿಗೆ ಎಲ್ಲಾ ರೀತಿಯಲ್ಲೂ ಕೇಂದ್ರ ಸರ್ಕಾರ ಸಹಾಯ ಮಾಡಬೇಕು. ಅಲ್ಲಿನ ಪರಿಸರ ಸಮಸ್ಯೆಗಳನ್ನು ಪರಿಶೀಲಿಸಬೇಕೆಂದು ಒತ್ತಾಯಿಸಿದರು.