ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಗ್ಯಾರಂಟಿ ಕರ್ನಾಟಕದಲ್ಲಿ ವಿಫಲ : ಕೇಂದ್ರ ಗೃಹ ಸಚಿವ ಅಮಿತ್ ಶಾ

| Published : Sep 30 2024, 01:30 AM IST / Updated: Sep 30 2024, 05:34 AM IST

Amith Shah

ಸಾರಾಂಶ

ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ರಾಹುಲ್ ಗಾಂಧಿಯವರ ಚುನಾವಣಾ ಭರವಸೆಗಳು ವಿಫಲವಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೊಡ್ಡ ಭರವಸೆಗಳನ್ನು ನೀಡುತ್ತದೆ ಆದರೆ ಅವುಗಳನ್ನು ಈಡೇರಿಸುವುದಿಲ್ಲ ಎಂದು ಹೇಳಿದರು.

ಚಂಡೀಗಢ: ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಗ್ಯಾರಂಟಿ’ ಚುನಾವಣಾ ಭರವಸೆಗಳು ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಂತಹ ರಾಜ್ಯಗಳಲ್ಲಿ ವಿಫಲವಾಗಿವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದರು.

ಹರ್ಯಾಣ ವಿಧಾನಸಭೆ ಚುನಾವಣೆ ನಿಮಿತ್ತ ಗುರುಗ್ರಾಮದ ಬಾದ್‌ಶಾಪುರದಲ್ಲಿ ಬಿಜೆಪಿ ರ್‍ಯಾಲಿಯಲ್ಲಿ ಮಾತನಾಡಿದ ಅವರು, ‘ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ದೊಡ್ಡ ಭರವಸೆಗಳನ್ನು ನೀಡುತ್ತದೆ. ಆದರೆ ಹಿಮಾಚಲ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ಅವರಿಗೆ ಚುನಾವಣಾ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗುತ್ತಿಲ್ಲ. ರಾಹುಲ್ ಗಾಂಧಿಯವರ ಭರವಸೆಗಳು ಫಲ ನೀಡಿಲ್ಲ’ ಎಂದರು.

‘ಆದರೆ, ಈಡೇರಿಸಲು ಆಗದಂಥ ಭರವಸೆಗಳನ್ನು ಬಿಜೆಪಿ ನೀಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.