ಸಾರಾಂಶ
ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನೆಯ 360 ಕಿ.ಮೀ. ಪೂರ್ಣಗೊಂಡಿದ್ದು, ಮಹಾರಾಷ್ಟ್ರ ವಿಭಾಗದಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗುತ್ತಿದೆ. ಸಮುದ್ರದೊಳಗಿನ ಸುರಂಗದ ಸುಮಾರು 2 ಕಿ.ಮೀ. ಮಾರ್ಗ ಪೂರ್ಣಗೊಂಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಅಹಮದಾಬಾದ್: ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನೆಯ 360 ಕಿ.ಮೀ. ಪೂರ್ಣಗೊಂಡಿದ್ದು, ಮಹಾರಾಷ್ಟ್ರ ವಿಭಾಗದಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗುತ್ತಿದೆ. ಸಮುದ್ರದೊಳಗಿನ ಸುರಂಗದ ಸುಮಾರು 2 ಕಿ.ಮೀ. ಮಾರ್ಗ ಪೂರ್ಣಗೊಂಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ವೈಷ್ಣವ್ ಶನಿವಾರ ಗುಜರಾತ್‌ನ ಅಹಮದಾಬಾದ್ ರೈಲು ನಿಲ್ದಾಣದ ಪುನರಾಭಿವೃದ್ಧಿ ಯೋಜನೆಯ ಕಾಮಗಾರಿಯನ್ನು ಪರಿಶೀಲಿಸಿ ನಂತರ ಮಾತನಾಡಿದರು.ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅವಧಿಯಲ್ಲಿ ಅನುಮತಿ ನಿರಾಕರಿಸಿದ್ದರಿಂದ ಯೋಜನೆಗೆ ಎರಡೂವರೆ ವರ್ಷಗಳ ವಿಳಂಬವಾಯಿತು. ಅದನ್ನು ಈಗ ಸರಿದೂಗಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ಒಟ್ಟು 508 ಕಿ.ಮೀ. ಬುಲೆಟ್ ರೈಲು ಮಾರ್ಗ ಇದಾಗಲಿದೆ. ಗಂಟೆಗೆ ಸರಾಸರಿ 170 ಕಿ.ಮೀ. ವೇಗದಲ್ಲಿ ರೈಲು ಸಂಚರಿಸಲಿದ್ದು, 3 ತಾಸಿನ ಯಾನ ಇದಾಗಲಿದೆ. 1.08 ಲಕ್ಷ ಕೋಟಿ ರು. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ.