ತತ್ಕಾಲ್‌ ಟಿಕೆಟ್‌ ಬುಕಿಂಗ್‌ನಲ್ಲಿ ನಕಲಿ ಟಿಕೆಟ್‌ಗಳನ್ನು ತಡೆಯುವ ಮತ್ತು ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರೈಲ್ವೆ ಇಲಾಖೆಯು ರಿಸರ್ವೇಷನ್‌ ಕೌಂಟರ್‌ನಲ್ಲಿ ತತ್ಕಾಲ್‌ ಟಿಕೆಟ್‌ ಬುಕಿಂಗ್‌ ಮಾಡುವವರಿಗೆ ಶೀಘ್ರದಲ್ಲಿ ಒಟಿಪಿ ಕಡ್ಡಾಯಗೊಳಿಸಲಿದೆ.

ನವದೆಹಲಿ: ತತ್ಕಾಲ್‌ ಟಿಕೆಟ್‌ ಬುಕಿಂಗ್‌ನಲ್ಲಿ ನಕಲಿ ಟಿಕೆಟ್‌ಗಳನ್ನು ತಡೆಯುವ ಮತ್ತು ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರೈಲ್ವೆ ಇಲಾಖೆಯು ರಿಸರ್ವೇಷನ್‌ ಕೌಂಟರ್‌ನಲ್ಲಿ ತತ್ಕಾಲ್‌ ಟಿಕೆಟ್‌ ಬುಕಿಂಗ್‌ ಮಾಡುವವರಿಗೆ ಶೀಘ್ರದಲ್ಲಿ ಒಟಿಪಿ ಕಡ್ಡಾಯಗೊಳಿಸಲಿದೆ.

ಪ್ರಸ್ತುತ 52 ರೈಲುಗಳ ತತ್ಕಾಲ್‌ ಟಿಕೆಟ್‌ ಬುಕಿಂಗ್‌ನಲ್ಲಿ ಪ್ರಾಯೋಗಿಕವಾಗಿ ಚಾಲ್ತಿಯಲ್ಲಿರುವ ಈ ವಿಧಾನವನ್ನು ಮುಂದಿನ ದಿನಗಳಲ್ಲಿ ಎಲ್ಲ ರೈಲುಗಳಿಗೂ ತರಲಾಗುವುದು ಎಂದು ಇಲಾಖೆ ತಿಳಿಸಿದೆ.

ಒಟಿಪಿ ಸೇವೆ ಹೇಗೆ?

ರಿಸರ್ವೇಷನ್‌ ಕೌಂಟರ್‌ನಲ್ಲಿ ತತ್ಕಾಲ್‌ ಟಿಕೆಟ್‌ ಬುಕಿಂಗ್‌ ಮಾಡುವಾಗ, ಪ್ರಯಾಣಿಕರ ವಿವರದ ಜೊತೆಗೆ ಕೊಡುವ ಮೊಬೈಲ್‌ ಸಂಖ್ಯೆಗೆ ಒಟಿಪಿ ಬರಲಿದೆ. ಈ ಒಟಿಪಿಯನ್ನು ಕೌಂಟರ್‌ನಲ್ಲಿರುವ ಸಿಬ್ಬಂದಿಗೆ ಕೊಡಬೇಕು. ಅವರು ಒಟಿಪಿಯನ್ನು ಕಂಪ್ಯೂಟರ್‌ನಲ್ಲಿ ನಮೂದಿಸಿದರೆ ಮಾತ್ರ ಟಿಕೆಟ್‌ ಆಗಲಿದೆ. ಒಟಿಪಿ ಬಾರದಿದ್ದರೆ ಟಿಕೆಟ್‌ ಬುಕ್‌ ಆಗುವುದಿಲ್ಲ.

ವೆಬ್‌ಸೈಟ್‌/ಆ್ಯಪ್‌ನಲ್ಲಿ ಬುಕಿಂಗ್‌ ಮಾಡುವವರಿಗೆ ಯಾವುದೇ ಒಟಿಪಿ ಇರುವುದಿಲ್ಲ

ಮಿಕ್ಕಂತೆ ಐಆರ್‌ಸಿಟಿಸಿ ವೆಬ್‌ಸೈಟ್‌/ಆ್ಯಪ್‌ನಲ್ಲಿ ಬುಕಿಂಗ್‌ ಮಾಡುವವರಿಗೆ ಯಾವುದೇ ಒಟಿಪಿ ಇರುವುದಿಲ್ಲ. ಇವರಿಗೆ ಈಗಾಗಲೇ ವೆಬ್‌/ಆ್ಯಪ್‌ಗೆ ಆಧಾರ್‌ ನೋಂದಣಿ ಕಡ್ಡಾಯ ಮಾಡಲಾಗಿದೆ.