ಸಾರಾಂಶ
ಚೆನ್ನೈನಲ್ಲಿ 12 ಎಕರೆ ಜಾಗದಲ್ಲಿ ರಜನಿಕಾಂತ್ ಬಡವರಿಗೆ ಉಚಿತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲಿದ್ಗದಾರೆ.
ಹೈದರಾಬಾದ್: ಜೈಲರ್ ಚಿತ್ರದ ಯಶಸ್ಸಿನ ಸಂಭ್ರಮದಲ್ಲಿರುವ ತಮಿಳು ಸೂಪರ್‌ಸ್ಟಾರ್ ರಜನಿಕಾಂತ್ ಬಡವರಿಗೆ ಉಚಿತ ಚಿಕಿತ್ಸೆ ನೀಡಲು ಚೆನ್ನೈ ಸಮೀಪ ಆಸ್ಪತ್ರೆ ನಿರ್ಮಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ಚೆನ್ನೈನ ಒಎಂಆರ್ ರಸ್ತೆಯಿಂದ ತಲಂಬೂರಿಗೆ ಹೋಗುವ ಮಾರ್ಗದಲ್ಲಿ ರಜನಿ 12 ಎಕರೆ ಜಮೀನಿ ಖರೀದಿಸಿದ್ದು ಅದರ ನೋಂದಣಿಯನ್ನು ಇತ್ತೀಚೆಗೆ ಚೆನ್ನೈನಲ್ಲಿ ಮಾಡಿಸಿದ್ದಾರೆ. ಈ ಜಾಗದಲ್ಲೇ ರಜನಿ ಆಸ್ಪತ್ರೆ ನಿರ್ಮಿಸಲು ಉದ್ದೇಶಿಸಿದ್ದು ಅಲ್ಲಿ ಬಡವರಿಗೆ ಉಚಿತ ಚಿಕಿತ್ಸೆ ನೀಡಲಿದ್ದಾರೆ ಎಂಬುದು ತಿಳಿದು ಬಂದಿದೆ. ಆಸ್ಪತ್ರೆಯ ನಿರ್ಮಾಣ ಕಾರ್ಯವು ಶೀಘ್ರದಲ್ಲೇ ಆರಂಭವಾಗಲಿದ್ದು, ಪ್ರಸ್ತುತ ಚಿತ್ರೀಕರಣದಲ್ಲಿರುವ ರಜಿನಿ, ಆಸ್ಪತ್ರೆ ನಿರ್ಮಾಣದ ಜವಾಬ್ದಾರಿಯನ್ನು ತನ್ನ ಸ್ನೇಹಿತನಿಗೆ ಒಪ್ಪಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.