ಕೇಂದ್ರದ ಮಾಜಿ ಸಚಿವರು, ಉದ್ಯಮಿ ರಾಜೀವ್‌ ಚಂದ್ರಶೇಖರ್‌ಗೆ ಕೇರಳ ಬಿಜೆಪಿಯ ಸಾರಥ್ಯ

| N/A | Published : Mar 25 2025, 12:45 AM IST / Updated: Mar 25 2025, 04:33 AM IST

ಸಾರಾಂಶ

  ಕೇರಳ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಕೇಂದ್ರದ ಮಾಜಿ ಸಚಿವ, ಉದ್ಯಮಿ ರಾಜೀವ್‌ ಚಂದ್ರಶೇಖರ್‌ ಆಯ್ಕೆಯಾಗಿದ್ದು, ಸೋಮವಾರ ಅಧಿಕಾರ ಸ್ವೀಕರಿಸಿದರು. 

ತಿರುವನಂತಪುರಂ: ಕೇರಳ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಕೇಂದ್ರದ ಮಾಜಿ ಸಚಿವ, ಉದ್ಯಮಿ ರಾಜೀವ್‌ ಚಂದ್ರಶೇಖರ್‌ ಆಯ್ಕೆಯಾಗಿದ್ದು, ಸೋಮವಾರ ಅಧಿಕಾರ ಸ್ವೀಕರಿಸಿದರು.ಅದಕ್ಕೂ ಮೊದಲು ತಿರುವನಂತಪುರಂನಲ್ಲಿ ನಡೆದ ಬಿಜೆಪಿ ರಾಜ್ಯ ಸಮಿತಿ ಸಭೆಯಲ್ಲಿ ಪಕ್ಷದ ಕೇಂದ್ರದ ವೀಕ್ಷಕ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಈ ಘೋಷಣೆ ಮಾಡಿದರು.

ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ರಾಜೀವ್‌ ಚಂದ್ರಶೇಖರ್‌ ಅವರು, ರಾಜ್ಯದಲ್ಲಿ ಬಿಜೆಪಿ ನೇತೃತ್ವದಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಗೆಲ್ಲಿಸುವ ಜವಾಬ್ದಾರಿ ನನಗೆ ವಹಿಸಲಾಗಿದೆ. ಈ ಗುರಿ ಸಾಧನೆಯ ಬಳಿಕವಷ್ಟೇ ನಾನು ವಿರಮಿಸುತ್ತೇನೆ. ನನಗೆ ಈ ಹೊಣೆಗಾರಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಮತ್ತಿತರರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.