ಸಾರಾಂಶ
ಮೊದಲ ಬಾರಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಲೋಕಸಭೆ ಅಖಾಡಕ್ಕೆ ಇಳಿಯುತ್ತಿದ್ದು, ಕಾಂಗ್ರೆಸ್‌ನ ಶಶಿ ತರೂರ್ ಅವರ ಪ್ರತಿಸ್ಪರ್ಧಿಯಾಗುವ ಸಾಧ್ಯತೆಯಿದೆ.
ನವದೆಹಲಿ: ಕೇಂದ್ರ ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ತಿರುವನಂತಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ.
ಈವರೆಗೆ ರಾಜ್ಯಸಭೆ ಸದಸ್ಯರಾಗಿದ್ದ ರಾಜೀವ್ ಇದೇ ಮೊದಲ ಬಾರಿ ಲೋಕಸಭೆ ಅಖಾಡಕ್ಕೆ ಇಳಿಯುತ್ತಿದ್ದಾರೆ,
ತಿರುವನಂತಪುರದಲ್ಲಿ ಕಾಂಗ್ರೆಸ್‌ನ ಶಶಿ ತರೂರ್ ಹಾಲಿ ಸಂಸದರಾಗಿದ್ದು, ಅವರ ವಿರುದ್ಧ ರಾಜೀವ್ ಕಣಕ್ಕೆ ಇಳಿಯುತ್ತಿರುವುದು ವಿಶೇಷವಾಗಿದೆ.
ಕರ್ನಾಟಕದಿಂದ ಮೂರು ಅವಧಿಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ರಾಜೀವ್ ಚಂದ್ರಶೇಖರ್ ಅವರ ರಾಜ್ಯಸಭಾ ಸದಸ್ಯತ್ವದ ಅವಧಿ ಇತ್ತೀಚೆಗೆ ಮುಕ್ತಾಯವಾಗಿದ್ದು, ಅವರಿಗೆ ಮತ್ತೆ ರಾಜ್ಯಸಭಾ ಚುನಾವಣೆಗೆ ಬಿಜೆಪಿಯಿಂದ ಉಮೇದುವಾರಿಕೆ ನೀಡಿರಲಿಲ್ಲ.
ಅಲ್ಲದೇ ಸ್ವತಃ ರಾಜೀವ್ ಚಂದ್ರಶೇಖರ್ ಸಹ ಹಲವು ಸಂದರ್ಶನಗಳಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಇದೀಗ ಅವರು ಮೊದಲ ಬಾರಿಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.