ಸಾರಾಂಶ
5 ಸಂವಿಧಾನದ ವಿಧಿ ಬದಲಿಸಲು ಶಿಫಾರಸು ಮಾಡಿ ಒಂದು ದೇಶ ಒಂದು ಚುನಾವಣೆ ನಡೆಸಲು ಇರುವ ಕಾನೂನು ತೊಡಕುಗಳನ್ನು ನಿವಾರಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ಶಿಫಾರಸು ಮಾಡಲಿದೆ ಎನ್ನಲಾಗಿದೆ.
ನವದೆಹಲಿ: ಭಾರತದಲ್ಲಿ ಸಂಸತ್ತಿನಿಂದ ಪಂಚಾಯಿತಿವರೆಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತು ಸಾಧಕ ಬಾಧಕಗಳನ್ನು ಪರಿಶೀಲಿಸಲು ರಚಿಸಲಾಗಿದ್ದ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿ ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವರದಿ ಸಲ್ಲಿಸುವ ಸಾಧ್ಯತೆ ಇದೆ. ವರದಿಯಲ್ಲಿ ಏಕ ದೇಶ ಏಕ ಚುನಾವಣೆ ನಡೆಸುವ ಕುರಿತು ಒಲವು ತೋರಿರುವ ಸಮಿತಿ ಇದಕ್ಕಾಗಿ ಸಂವಿಧಾನದ ಕೊನೆಯ 5 ವಿಧಿಗಳಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡುವಂತೆ ವರದಿಯಲ್ಲಿ ಉಲ್ಲೇಖಿಸಿದೆ ಎನ್ನಲಾಗಿದೆ. ಈ ಸಮಿತಿಯನ್ನು ಕಳೆದ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ರಚಿಸಿತ್ತು.