ರನ್ಯಾ ಚಿನ್ನ ಸ್ಮಗ್ಲಿಂಗ್‌ : ಪತಿ ಹಾಗೂ ಕಾಂಗ್ರೆಸ್‌ನ ಒಂದು ಬಣದಿಂದ ಅಧಿಕಾರಿಗಳಿಗೆ ಮಾಹಿತಿ - ಸಚಿವರು ಯಾರು?

| N/A | Published : Mar 11 2025, 12:46 AM IST / Updated: Mar 11 2025, 04:47 AM IST

ರನ್ಯಾ ಚಿನ್ನ ಸ್ಮಗ್ಲಿಂಗ್‌ : ಪತಿ ಹಾಗೂ ಕಾಂಗ್ರೆಸ್‌ನ ಒಂದು ಬಣದಿಂದ ಅಧಿಕಾರಿಗಳಿಗೆ ಮಾಹಿತಿ - ಸಚಿವರು ಯಾರು?
Share this Article
  • FB
  • TW
  • Linkdin
  • Email

ಸಾರಾಂಶ

ಅಕ್ರಮವಾಗಿ ಚಿನ್ನ ಸಾಗಣೆ ಆರೋಪದ ಮೇಲೆ ಬಂಧಿತರಾಗಿರುವ ನಟಿ ರನ್ಯಾರಾವ್‌ ಪ್ರಕರಣ ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದ್ದು, ಆಕೆಯ ಜತೆ ನಂಟು ಹೊಂದಿರುವ ಸಚಿವರ ಹೆಸರು ಬಹಿರಂಗಪಡಿಸುವಂತೆ ಪ್ರತಿಪಕ್ಷ ಬಿಜೆಪಿ ಆಗ್ರಹಿಸಿದೆ.

 ವಿಧಾನಸಭೆ : ಅಕ್ರಮವಾಗಿ ಚಿನ್ನ ಸಾಗಣೆ ಆರೋಪದ ಮೇಲೆ ಬಂಧಿತರಾಗಿರುವ ನಟಿ ರನ್ಯಾರಾವ್‌ ಪ್ರಕರಣ ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದ್ದು, ಆಕೆಯ ಜತೆ ನಂಟು ಹೊಂದಿರುವ ಸಚಿವರ ಹೆಸರು ಬಹಿರಂಗಪಡಿಸುವಂತೆ ಪ್ರತಿಪಕ್ಷ ಬಿಜೆಪಿ ಆಗ್ರಹಿಸಿದೆ.

ಸೋಮವಾರ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ವಿ.ಸುನೀಲ್ ಕುಮಾರ್ ಅವರು, ರಾಜ್ಯ ಸರ್ಕಾರ ಯಾರನ್ನೋ ರಕ್ಷಣೆ ಮಾಡುವ ಪ್ರಯತ್ನ ನಡೆಸುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಇದು ಅಂತಾರಾಷ್ಟ್ರೀಯ ಚಿನ್ನ ಸಾಗಾಟ ಪ್ರಕರಣವಾಗಿದೆ. 14 ಕೆಜಿ ಚಿನ್ನ ವಶಕ್ಕೆ ಪಡೆಯಲಾಗಿದೆ ಎಂಬ ಸುದ್ದಿ ಇದೆ. ಇದರ ಹಿಂದೆ ಹವಾಲಾ ದಂಧೆ ಇದೆ ಎಂಬ ಅನುಮಾನ ಇದೆ. ಬೇರೆ ಬೇರೆ ರಾಜ್ಯಗಳಿಗೆ ಅಕ್ರಮ ಚಿನ್ನ ಸಾಗಾಟದಲ್ಲಿ ಬೆಂಗಳೂರು ಕೇಂದ್ರ ಆಗಿದೆಯೇ? ಎಂಬ ಅನುಮಾನ ಇದೆ. ಅಲ್ಲದೇ, ಪ್ರಕರಣದಲ್ಲಿ ಸಚಿವರ ಕೈವಾಡ ಇದೆ ಎಂಬ ಆರೋಪ ಇದೆ. ಪ್ರಭಾವಿ ವ್ಯಕ್ತಿಗಳು ಯಾರು ಎಂಬುದು ಬಹಿರಂಗವಾಗಬೇಕು ಎಂದರು.

ಇದಕ್ಕೆ ಉತ್ತರ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಕೇಂದ್ರದ ತನಿಖಾ ಸಂಸ್ಥೆಯಿಂದ ನಟಿ ರನ್ಯಾರಾವ್‌ ಬಂಧನಕ್ಕೊಳಗಾಗಿದ್ದಾರೆ. ಸರ್ಕಾರಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ನೀಡಲ್ಲ. ಮಾಧ್ಯಮಗಳಲ್ಲಿ ಬಂದಿದ್ದನ್ನು ಮಾತ್ರ ಗಮನಿಸಿದ್ದೇವೆ. ಸಿಬಿಐ ಈಗ ತನಿಖೆ ಕೈಗೊಂಡಿದೆ. ಯಾರ ಕೈವಾಡ ಇದೆ ಎಂಬುದನ್ನು ಸಿಬಿಐ ಹೇಳಬೇಕು ಎಂದರು.

ವಿಮಾನ ನಿಲ್ದಾಣದ ಬಳಿ ಆಕೆಗೆ ರಾಜ್ಯ ಪೊಲೀಸ್‌ ವಾಹನ ಬೆಂಗಾವಲು ನೀಡಿದ್ದು ಎಂಬ ಮಾಹಿತಿ ಇದ್ದು, ಆ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ ಎಂದು ತಿಳಿಸಿದರು.

ಕಾಂಗ್ರೆಸ್‌ನ ಒಂದು ಬಣದಿಂದ ಚಿನ್ನ ಸ್ಮಗ್ಲಿಂಗ್‌ ಮಾಹಿತಿ ಲೀಕ್‌?

 ನಟಿ ರನ್ಯಾ ತಂಡದ ಚಿನ್ನ ಕಳ್ಳ ಸಾಗಾಣಿಕೆ ಕೃತ್ಯದ ಮಾಹಿತಿಯನ್ನು ಕಂದಾಯ ಜಾರಿನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳಿಗೆ ಆಕೆಯ ಪತಿ ಹಾಗೂ ಕಾಂಗ್ರೆಸ್ ಪಕ್ಷದ ಒಂದು ಬಣವೇ ಸೋರಿಕೆ ಮಾಡಿದೆ ಎನ್ನಲಾಗುತ್ತಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಪತ್ನಿ ಜತೆ ಮುನಿಸಿಕೊಂಡು ದೂರವಾಗಿದ್ದ ರನ್ಯಾಳ ಪತಿ ಜತಿನ್ ಹುಕ್ಕೇರಿ ಅಥವಾ ಸಚಿವರೊಬ್ಬರಿಗೆ ಬ್ರೇಕ್ ಹಾಕುವ ಸಲುವಾಗಿ ಚಿನ್ನ ಸಾಗಾಣಿಕೆ ಬಗ್ಗೆ ಡಿಆರ್‌ಐ ಅಧಿಕಾರಿಗೆ ಆ ಸಚಿವರ ರಾಜಕೀಯ ವಿರೋಧಿ ಗುಂಪಿನ ಪ್ರಭಾವಿ ಮಾಹಿತಿ ಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.