ನವದೆಹಲಿ: ಇತ್ತೀಚೆಗೆ ಭಾರೀ ಸುದ್ದಿಯಾಗಿದ್ದ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನಾಲ್ವರ ವಿಚಾರಣೆ ನಡೆಸಿದ್ದಾರೆ. ಜಾಲತಾಣಗಳಲ್ಲಿ ಮೊದಲಿಗೆ ವಿಡಿಯೋ ಅಪ್ಲೋಡ್ ಮಾಡಿದವರು ಇವರೇ ಎಂದು ಶಂಕಿಸಲಾಗಿದ್ದು, ಈ ಸಂಬಂಧ ವಿಚಾರಣೆ ನಡೆಸಲಾಗಿದೆ.
ಇನ್‌ಸ್ಟಾಗ್ರಾಂ, ಫೇಸ್‌ಬುಕ್ ಮತ್ತು ವಾಟ್ಸಾಪ್‌ಗಳ ಮಾತೃಸಂಸ್ಥೆಯಾದ ಮೆಟಾ ಸಂಸ್ಥೆಯು ಪೊಲೀಸರಿಗೆ ಇವರುಗಳ ಮಾಹಿತಿ ನೀಡಿದೆ ಎನ್ನಲಾಗಿದೆ. ಆದರೆ ಈ ಆರೋಪಿಗಳು ಕೃತಕ ಬುದ್ಧಿಮತ್ತೆಯ ಮೂಲಕ ನಟಿಯ ವಿಡಿಯೋವನ್ನು ಸೃಷ್ಟಿಸಿದವರಲ್ಲ. ಬದಲಾಗಿ ವಿಡಿಯೋವನ್ನು ಹರಿಬಿಟ್ಟವರಷ್ಟೇ ಎಂಬುದು ಪತ್ತೆಯಾಗಿದ್ದರಿಂದ ಅವರನ್ನು ಬಿಡುಗಡೆಗೊಳಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ನಟಿ ರಶ್ಮಿಕಾ ಡೀಪ್‌ಫೇಕ್ ವಿಡಿಯೋ ಹರಿಬಿಟ್ಟ ನಾಲ್ವರ ವಿಚಾರಣೆ
ಇತ್ತೀಚೆಗೆ ಭಾರೀ ಸುದ್ದಿಯಾಗಿದ್ದ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನಾಲ್ವರ ವಿಚಾರಣೆ ನಡೆಸಿದ್ದಾರೆ. ಜಾಲತಾಣಗಳಲ್ಲಿ ಮೊದಲಿಗೆ ವಿಡಿಯೋ ಅಪ್ಲೋಡ್ ಮಾಡಿದವರು ಇವರೇ ಎಂದು ಶಂಕಿಸಲಾಗಿದ್ದು, ಈ ಸಂಬಂಧ ವಿಚಾರಣೆ ನಡೆಸಲಾಗಿದೆ.
Latest Videos
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.