ಅರವಿಂದ್‌ ಕೇಜ್ರಿವಾಲ್‌ ಬಂಧನದ ಕುರಿತು ಹಾಗೂ ಕಾಂಗ್ರೆಸ್‌ ಖಾತೆಗಳ ಜಪ್ತಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ ಅಮೆರಿಕಕ್ಕೆ ಭಾರತ ಪರೋಕ್ಷ ಎಚ್ಚರಿಕೆ ನೀಡಿದ್ದು, ನಮ್ಮ ಆಂತರಿಕ ವಿಷಯಗಳಲ್ಲಿ ವಿದೇಶಿಯರ ಹಸ್ತಕ್ಷೇಪ ಅನಗತ್ಯ ಎಂದು ಪುನರುಚ್ಚರಿಸಿದೆ.

ನವದೆಹಲಿ: ಅರವಿಂದ್‌ ಕೇಜ್ರಿವಾಲ್‌ ಬಂಧನದ ಕುರಿತು ಹಾಗೂ ಕಾಂಗ್ರೆಸ್‌ ಖಾತೆಗಳ ಜಪ್ತಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ ಅಮೆರಿಕಕ್ಕೆ ಭಾರತ ಪರೋಕ್ಷ ಎಚ್ಚರಿಕೆ ನೀಡಿದ್ದು, ನಮ್ಮ ಆಂತರಿಕ ವಿಷಯಗಳಲ್ಲಿ ವಿದೇಶಿಯರ ಹಸ್ತಕ್ಷೇಪ ಅನಗತ್ಯ ಎಂದು ಪುನರುಚ್ಚರಿಸಿದೆ. 

ವಿದೇಶಾಂಗ ಇಲಾಖೆ ವಕ್ತಾರ ರಣಧೀರ್‌ ಜೈಸ್ವಾಲ್‌ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡುತ್ತಾ, ‘ಭಾರತವು ಸ್ವತಂತ್ರ ರಾಷ್ಟ್ರವಾಗಿದೆ ಎಂದು ಹೇಳಿಕೊಳ್ಳಲು ನಮಗೆ ಹೆಮ್ಮೆಯಿದೆ. 

ನಮ್ಮ ಚುನಾವಣೆ ಮತ್ತು ಕಾನೂನಿನ ವಿಚಾರದಲ್ಲಿ ವಿದೇಶಿ ಶಕ್ತಿಗಳ ಹಸ್ತಕ್ಷೇಪ ಸಲ್ಲದು. ನಮ್ಮ ಪ್ರಜಾಪ್ರಭುತ್ವವನ್ನು ವಿದೇಶಿಯರ ಆಕ್ರಮಣದಿಂದ ರಕ್ಷಿಸಿಕೊಳ್ಳಲು ಬದ್ಧವಾಗಿದೆ’ ಎಂದು ತಿಳಿಸಿದರು.