ಮಲಯಾಳಂ ನಟಿ ರೆಂಜೂಷಾ ಮೆನನ್‌ ನಿಗೂಢ ಸಾವು

| Published : Oct 31 2023, 01:15 AM IST

ಸಾರಾಂಶ

ಮಲಯಾಳಂನಲ್ಲಿ ಹಲವಾರು ಧಾರಾವಾಹಿ ಹಾಗೂ ಚಲನಚಿತ್ರಗಳಲ್ಲಿ ನಟಿಸಿದ್ದ ನಟಿ ರೆಂಜೂಷಾ ಮೆನನ್‌ (35) ನಿಗೂಢವಾಗಿ ಸಾವನ್ನಪ್ಪಿದ್ದಾರೆ.
ತಿರುವನಂತಪುರ: ಮಲಯಾಳಂನಲ್ಲಿ ಹಲವಾರು ಧಾರಾವಾಹಿ ಹಾಗೂ ಚಲನಚಿತ್ರಗಳಲ್ಲಿ ನಟಿಸಿದ್ದ ನಟಿ ರೆಂಜೂಷಾ ಮೆನನ್‌ (35) ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಇಲ್ಲಿನ ಕರಿಯಂನಲ್ಲಿನ ಅಪಾರ್ಟ್‌ಮೆಂಟ್‌ನಲ್ಲಿ ರೆಂಜೂಷಾ ಮೃತದೇಹ ಪತ್ತೆಯಾಗಿದ್ದು, ಸಾವಿನ ಅಸಲಿ ಕಾರಣ ಇನ್ನು ತಿಳಿದುಬಂದಿಲ್ಲ. ಇದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರೆಂಜೂಷಾ ಆರ್ಥಿಕವಾಗಿ ಸಂಕಷ್ಟದಲ್ಲಿದ್ದರು ಎಂದು ವರದಿಗಳು ತಿಳಿಸಿವೆ.