ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿ ವೇಳೆ ಎಡಗಾಲಿನ ಮೂಳೆ ಮುರಿತಕ್ಕೆ ಒಳಗಾಗಿದ್ದ ವಿಕೆಟ್‌ ಕೀಪರ್‌, ಬ್ಯಾಟರ್ ರಿಷಭ್‌ ಪಂತ್ ಅ.2ರಿಂದ ತವರಿನಲ್ಲಿ ಆರಂಭವಾಗಲಿರುವ ವೆಸ್ಟ್‌ ಇಂಡೀಸ್‌ ವಿರುದ್ಧದ ಟೆಸ್ಟ್‌ ಸರಣಿಯಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

ನವದೆಹಲಿ: ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿ ವೇಳೆ ಎಡಗಾಲಿನ ಮೂಳೆ ಮುರಿತಕ್ಕೆ ಒಳಗಾಗಿದ್ದ ವಿಕೆಟ್‌ ಕೀಪರ್‌, ಬ್ಯಾಟರ್ ರಿಷಭ್‌ ಪಂತ್ ಅ.2ರಿಂದ ತವರಿನಲ್ಲಿ ಆರಂಭವಾಗಲಿರುವ ವೆಸ್ಟ್‌ ಇಂಡೀಸ್‌ ವಿರುದ್ಧದ ಟೆಸ್ಟ್‌ ಸರಣಿಯಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. 

ಪಂತ್‌ ಸದ್ಯ ಬೆಂಗಳೂರಿನ ಬಿಸಿಸಿಐ ಸೆಂಟರ್‌ ಆಫ್‌ ಎಕ್ಸ್‌ಲೆನ್ಸ್‌ನಲ್ಲಿ ಪುನಶ್ಚೇತನ ಶಿಬಿರದಲ್ಲಿದ್ದಾರೆ. ಪಂತ್‌ ಬದಲು ಧೃವ್‌ ಜುರೆಲ್‌ ಕೀಪರ್‌-ಬ್ಯಾಟರ್‌ ಆಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿದೆ. ಎನ್‌.ಜಗದೀಶನ್‌ ಮೀಸಲು ಕೀಪರ್‌ ಆಗಿ ಸ್ಥಾನ ಪಡೆಯಬಹುದು. ಸೆ.24ರಂದು ಬಿಸಿಸಿಐ ಭಾರತ ತಂಡವನ್ನು ಆಯ್ಕೆ ಮಾಡಲಿದ್ದು, ದೇವದತ್‌ ಪಡಿಕ್ಕಲ್‌ ಹಾಗೂ ನಿತೀಶ್‌ ರೆಡ್ಡಿಗೆ ಅವಕಾಶ ಸಿಗುವ ನಿರೀಕ್ಷೆ ಇದೆ.