ನಾನು ರಾಜಕೀಯಕ್ಕೆ ಬರಲಿ ಎಂದು ಇಡೀ ದೇಶ ಬಯಸುತ್ತಿದೆ: ವಾದ್ರಾ

| Published : Apr 28 2024, 01:15 AM IST / Updated: Apr 28 2024, 05:35 AM IST

Robert Vadra
ನಾನು ರಾಜಕೀಯಕ್ಕೆ ಬರಲಿ ಎಂದು ಇಡೀ ದೇಶ ಬಯಸುತ್ತಿದೆ: ವಾದ್ರಾ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ಹಾಗೂ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್‌ ವಾದ್ರಾ ಮತ್ತೊಮ್ಮೆ ರಾಜಕೀಯಕ್ಕೆ ಬರುವ ಬಯಕೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದು, ‘ಇಡೀ ದೇಶ ನಾನು ಸಕ್ರಿಯ ರಾಜಕಾರಣಕ್ಕೆ ಬರಲಿ ಎಂದು ಬಯಸುತ್ತಿದೆ’ ಎಂದು ಹೇಳಿದ್ದಾರೆ.

ಹೃಷಿಕೇಶ: ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ಹಾಗೂ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್‌ ವಾದ್ರಾ ಮತ್ತೊಮ್ಮೆ ರಾಜಕೀಯಕ್ಕೆ ಬರುವ ಬಯಕೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದು, ‘ಇಡೀ ದೇಶ ನಾನು ಸಕ್ರಿಯ ರಾಜಕಾರಣಕ್ಕೆ ಬರಲಿ ಎಂದು ಬಯಸುತ್ತಿದೆ’ ಎಂದು ಹೇಳಿದ್ದಾರೆ. ತನ್ಮೂಲಕ, ರಾಹುಲ್‌ ಗಾಂಧಿ ಪರಾಭವಗೊಂಡ ಉತ್ತರ ಪ್ರದೇಶದ ಅಮೇಠಿ ಕ್ಷೇತ್ರದಲ್ಲಿ ತಾವು ಸ್ಪರ್ಧಿಸುವ ಬಯಕೆ ವ್ಯಕ್ತಪಡಿಸಿದ್ದಾರೆ.

‘ಇಡೀ ದೇಶದ ಧ್ವನಿ ನನಗೆ ಕೇಳಿಸುತ್ತಿದೆ. ನಾನು ಸಕ್ರಿಯ ರಾಜಕಾರಣಕ್ಕೆ ಬರಲಿ ಎಂದು ಜನರು ಬಯಸುತ್ತಿದ್ದಾರೆ. ನಾನು ತಮ್ಮ ಜೊತೆ ಇರಲಿ ಎಂದು ಜನರು ಯಾವಾಗಲೂ ಬಯಸುತ್ತಿದ್ದರು. 1999ರಲ್ಲಿ ನಾನು ಅಮೇಠಿಯಲ್ಲಿ ಪ್ರಚಾರ ಮಾಡಿದ್ದೆ. ಅಲ್ಲಿನ ಹಾಲಿ ಸಂಸದೆ ಸ್ಮೃತಿ ಇರಾನಿ ತಮ್ಮ ಭರವಸೆಗಳನ್ನು ಈಡೇರಿಸಿಲ್ಲ’ ಎಂದು ವಾದ್ರಾ ಹೇಳಿದ್ದಾರೆ.

ಸೋನಿಯಾ ಗಾಂಧಿ ಈ ಹಿಂದೆ ಪ್ರತಿನಿಧಿಸಿದ್ದ ರಾಯ್‌ಬರೇಲಿ ಹಾಗೂ ರಾಹುಲ್‌ ಗಾಂಧಿ ಪ್ರತಿನಿಧಿಸಿದ್ದ ಅಮೇಠಿ ಕ್ಷೇತ್ರಕ್ಕೆ ಐದನೇ ಹಂತದಲ್ಲಿ ಮೇ 20ರಂದು ಮತದಾನ ನಡೆಯಲಿದ್ದು, ಅಲ್ಲಿಗೆ ಇನ್ನೂ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳನ್ನು ಘೋಷಿಸಿಲ್ಲ.