ಸಾರಾಂಶ
ಭಾರತದ ಬ್ಯಾಂಕುಗಳಲ್ಲಿ ಸಾಲ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ ₹ 14,131 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡು ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ನವದೆಹಲಿ: ಭಾರತದ ಬ್ಯಾಂಕುಗಳಲ್ಲಿ ಸಾಲ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ ₹ 14,131 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡು ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಈ ಕುರಿತು ಬುಧವಾರ ಸಂಸತ್ತಿಗೆ ಮಾಹಿತಿ ನೀಡಿದ ಅವರು, ’ಮಲ್ಯ ಹಾಗೂ ಇತರ ದೇಶಭ್ರಷ್ಟ ಉದ್ಯಮಿಗಳಾದ ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿಯಂತಹ ವಾಂಟೆಡ್ ವ್ಯಕ್ತಿಗಳ ಸಾಲವನ್ನು ಮರುಪಾವತಿಸಲು ಜಾರಿ ನಿರ್ದೇಶನಾಲಯವು ಒಟ್ಟು ₹ 22,280 ಕೋಟಿ ಮೌಲ್ಯದ ಆಸ್ತಿಯನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ ಹಾಗೂ ಆರ್ಥಿಕ ಅಪರಾಧಿಗಳ ವಿರುದ್ಧದ ಹೋರಾಟವನ್ನು ಮುಂದುವರಿಸಲು ನಿರ್ಧರಿಸಲಾಗಿದೆ’ ಎಂದು ಹೇಳಿದರು.ವಿವರ 9