ಮೆದುಳಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಈಶಾ ಫೌಂಡೇಷನ್‌ನ ಸದ್ಗುರು ಅವರ ಆರೋಗ್ಯ ಸ್ಥಿರವಾಗಿದೆ.

ನವದೆಹಲಿ: ಮೆದುಳಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಈಶಾ ಫೌಂಡೇಷನ್‌ನ ಸದ್ಗುರು ಅವರ ಆರೋಗ್ಯ ಸ್ಥಿರವಾಗಿದೆ. ಅವರು ಉತ್ತಮ ರೀತಿಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಅವರ ಆರೋಗ್ಯ ಚೇತರಿಕೆಯಾಗುತ್ತಿದೆ ಎಂದು ಈಶಾ ಫೌಂಡೇಷನ್‌ ಹೇಳಿಕೆ ನೀಡಿದೆ. 

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಈಶಾ ಫೌಂಡೇಷನ್‌,‘ಸದ್ಗುರು ಅವರು ಉತ್ತಮ ರೀತಿಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಅವರ ಆರೋಗ್ಯ ವೇಗವಾಗಿ ಗುಣಮುಖವಾಗುತ್ತಿದೆ’ ಎಂದು ಮಾಹಿತಿ ಹಂಚಿಕೊಂಡಿದೆ. 

ಮೆದುಳಿನಲ್ಲಿ ರಕ್ತಸ್ರಾವವಾಗುತ್ತಿದ್ದ ಕಾರಣ ಸದ್ಗುರು ಅವರು ದೆಹಲಿಯ ಇಂದ್ರಪ್ರಸ್ತ ಅಪೋಲೋ ಆತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದರು.