ಸಾರಾಂಶ
ಭಾರತದ ತಾರಾ ಶಟ್ಲರ್‌ಗಳಾದ ಸೈನಾ ನೆಹ್ವಾಲ್ ಹಾಗೂ ಪಾರುಪಳ್ಳಿ ಕಶ್ಯಪ್ ತಮ್ಮ ವೈವಾಹಿಕ ಜೀವನಕ್ಕೆ ಅಂತ್ಯವಾಡಿದ್ದಾರೆ
ನವದೆಹಲಿ: ಭಾರತದ ತಾರಾ ಶಟ್ಲರ್‌ಗಳಾದ ಸೈನಾ ನೆಹ್ವಾಲ್ ಹಾಗೂ ಪಾರುಪಳ್ಳಿ ಕಶ್ಯಪ್ ತಮ್ಮ ವೈವಾಹಿಕ ಜೀವನಕ್ಕೆ ಅಂತ್ಯವಾಡಿದ್ದಾರೆ. ಈ ವಿಷಯವನ್ನು ಸ್ವತಃ ಸೈನಾ ಇನ್‌ಸ್ಟಾಗ್ರಾಂನಲ್ಲಿ ಪ್ರಕಟಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ಕಶ್ಯಪ್‌ರಿಂದ ದೂರವಾಗುತ್ತಿರುವುದಾಗಿ ಸೈನಾ ಹೇಳಿಕೊಂಡಿದ್ದಾರೆ.
2012 ಲಂಡನ್ ಒಲಿಂಪಿಕ್ಸ್ ಪದಕ ವಿಜೇತೆ ಸೈನಾ, ಮಾಜಿ ವಿಶ್ವ ನಂ.6 ಶಟ್ಲರ್ ಕಶ್ಯಪ್‌ರನ್ನು 2018ರಲ್ಲಿ ವಿವಾಹವಾಗಿದ್ದರು.