ಸಾರಾಂಶ
ಹರ್ಯಾಣದ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಗುರುವಾರ ಇಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಚಂಡೀಗಢ: ಹರ್ಯಾಣದ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಗುರುವಾರ ಇಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ವಾಲ್ಮೀಕಿ ಜಯಂತಿ ದಿನದಂದೇ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಸೈನಿ ಜೊತೆಗೆ ಇತರೆ 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿಯ ಹಿರಿಯ ನಾಯಕರು ಸೇರಿದಂತೆ ಎನ್‌ಡಿಎ ಕೂಟದ ಆಡಳಿತವಿರುವ ರಾಜ್ಯಗಳ 13 ಮುಖ್ಯಮಂತ್ರಿಗಳು 16 ಉಪಮುಖ್ಯಮಂತ್ರಿಗಳು ಹಾಜರಿದ್ದರು.
ರಾಜ್ಯದಲ್ಲಿ ಬಿಜೆಪಿ ದಾಖಲೆ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಏರಿದ್ದರೆ, ಸೈನಿ ಸತತ 2ನೇ ಬಾರಿ ಮುಖ್ಯಮಂತ್ರಿಯಾಗುವ ಅವಕಾಶ ಪಡೆದುಕೊಂಡಿದ್ದದಾರೆ. ಅ.5ರಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ 90 ಸ್ಥಾನಗಳ ಪೈಕಿ ಬಿಜೆಪಿ 48ರಲ್ಲಿ ಜಯಗಳಿಸಿತ್ತು.