ಸಾರಾಂಶ
ಉತ್ತರ ಪ್ರದೇಶದ ಸಂಭಲ್‌ನಲ್ಲಿರುವ ಜಾಮಾ ಮಸೀದಿ ಸಮೀಕ್ಷೆಗೆ ಸ್ಥಳೀಯ ನ್ಯಾಯಾಲಯ ನ.19ರಂದು ನೀಡಿದ ಆದೇಶದ ವಿರುದ್ಧ ಮಸೀದಿ ನಿರ್ವಹಣಾ ಸಮಿತಿ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಮುಖ್ಯ ನ್ಯಾ। ಸಂಜೀವ್ ಖನ್ನಾ ನೇತೃತ್ವದ ಪೀಠ ಮಸೀದಿ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಲಿದೆ.
ನವದೆಹಲಿ: ಉತ್ತರ ಪ್ರದೇಶದ ಸಂಭಲ್‌ನಲ್ಲಿರುವ ಜಾಮಾ ಮಸೀದಿ ಸಮೀಕ್ಷೆಗೆ ಸ್ಥಳೀಯ ನ್ಯಾಯಾಲಯ ನ.19ರಂದು ನೀಡಿದ ಆದೇಶದ ವಿರುದ್ಧ ಮಸೀದಿ ನಿರ್ವಹಣಾ ಸಮಿತಿ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಮುಖ್ಯ ನ್ಯಾ। ಸಂಜೀವ್ ಖನ್ನಾ ನೇತೃತ್ವದ ಪೀಠ ಮಸೀದಿ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಲಿದೆ.
ಬಂದೋಬಸ್ತ್‌ಈ ನಡುವೆ ಶುಕ್ರವಾರದ ಪ್ರಾರ್ಥನೆ ಮತ್ತು ಸುಪ್ರೀಂಕೋರ್ಟ್‌ನಲ್ಲಿ ಮಸೀದಿ ಸಮೀಕ್ಷೆ ಕುರಿತು ಶುಕ್ರವಾರ ಅರ್ಜಿ ವಿಚಾರಣೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಸಂಭಲ್‌ನಲ್ಲಿ ಪೊಲೀಸರು ಭಾರೀ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಗುರುವಾರ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ನಗರದಲ್ಲಿ ಧ್ವಜಪಥ ಸಂಚಲನ ನಡೆಸಲಾಗಿದೆ. ಸದ್ಯ ನಗರದಲ್ಲಿ ಪರಿಸ್ಥಿತಿ ಶಾಂತಿಯುತವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸರು ಎಲ್ಲಾ ಅಗತ್ಯ ಕ್ರಮ ಕೈಗೊಂಡಿದ್ದಾರೆ.