ಸಾರಾಂಶ
ಪ್ರಕರಣಕ್ಕೆ ತೇಪೆ ಹಚ್ಚಲು ಮುಂದಾದ ಎಎಪಿ ಹಲ್ಲೆಗೊಳಗಾದ ಸ್ವಾತಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದೆ.
ನವದೆಹಲಿ: ದೆಹಲಿ ಮುಖ್ಯಮಂತ್ರಿ ನಿವಾಸದಲ್ಲಿ ಆಪ್ ಸಂಸದೆ ಸ್ವಾತಿ ಮಲಿವಾಲ್ ಹಲ್ಲೆಗೆ ಒಳಗಾಗಿರುವುದನ್ನು ಸುದ್ದಿಗೋಷ್ಠಿಯಲ್ಲಿ ಒಪ್ಪಿಕೊಂಡ ಮರುದಿನ ಆಪ್ ನಾಯಕ ಸಂಜಯ್ ಸಿಂಗ್ ಖುದ್ದು ಆಕೆಯ ಮನೆಗೆ ತೆರಳಿ ಸಾಂತ್ವನ ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್ ಆಪ್ತ ಭಿಭವ್ ಕುಮಾರ್ ಎಂಬ ವ್ಯಕ್ತಿ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಪೊಲೀಸರಿಗೆ ಕರೆ ಮಾಡಿ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೂ ಭೇಟಿ ನೀಡಿದ್ದರು. ಬಳಿಕ ಆಮ್ ಆದ್ಮಿ ಪಕ್ಷ ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿತ್ತು.
ಬಿಜೆಪಿ ಆಕ್ರೋಶ: ಈ ನಡುವೆ ಬಿಜೆಪಿ ಸೇರಿದಂತೆ ಹಲವು ಪಕ್ಷಗಳು ಆಮ್ ಆದ್ಮಿ ಪಕ್ಷದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥ ಭಿಭವ್ ಕುಮಾರ್ ಮೇಲೆ ಏಕೆ ಇನ್ನೂ ಕ್ರಮ ಕೈಗೊಂಡಿಲ್ಲ ಎಂಬುದಾಗಿ ಪ್ರಶ್ನಿಸಿವೆ.