ಸಾರ್ವಜನಿಕವಾಗಿ ಆಸ್ತಿ ವಿವರಗಳನ್ನು ಘೋಷಣೆ ಮಾಡಲು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ನಿರ್ಧಾರ

| N/A | Published : Apr 04 2025, 12:46 AM IST / Updated: Apr 04 2025, 04:33 AM IST

Supreme Court of India (File Photo/ANI)
ಸಾರ್ವಜನಿಕವಾಗಿ ಆಸ್ತಿ ವಿವರಗಳನ್ನು ಘೋಷಣೆ ಮಾಡಲು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ನಿರ್ಧಾರ
Share this Article
  • FB
  • TW
  • Linkdin
  • Email

ಸಾರಾಂಶ

 ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರ ವಹಿಸಿಕೊಂಡ ಬಳಿಕ ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕವಾಗಿ ಘೋಷಣೆ ಮಾಡಲು ಸಿಜೆಐ ಸೇರಿದಂತೆ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರು ನಿರ್ಧರಿಸಿದ್ದಾರೆ.

ನವದೆಹಲಿ :ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರ ವಹಿಸಿಕೊಂಡ ಬಳಿಕ ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕವಾಗಿ ಘೋಷಣೆ ಮಾಡಲು ಸಿಜೆಐ ಸೇರಿದಂತೆ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರು ನಿರ್ಧರಿಸಿದ್ದಾರೆ.

ಗುರುವಾರ ಇಲ್ಲಿ ಸಭೆ ಸೇರಿದ್ದ ಸುಪ್ರೀಂಕೋರ್ಟ್‌ನ ಎಲ್ಲಾ ನ್ಯಾಯಾಧೀಶರನ್ನು ಒಳಗೊಂಡ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಿದೆ. , ಆಸ್ತಿ ವಿವರಗಳ ಬಹಿರಂಗದ ಜೊತೆಗೆ ಅದರ ಅಂಕಿ ಅಂಶಗಳನ್ನು ಸುಪ್ರಿಂಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್ಲೋಡ್‌ ಮಾಡಲಾಗುವುದು.

ಜೊತೆಗೆ ‘ನ್ಯಾಯಾಧೀಶರು ಅಧಿಕಾರ ವಹಿಸಿಕೊಳ್ಳುವಾಗ ಮತ್ತು ಯಾವುದೇ ಸ್ವರೂಪದ ಆಸ್ತಿಯನ್ನು ಖರೀದಿಸಿದರೆ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಾಧೀಶರಿಗೆ ತಮ್ಮ ಆಸ್ತಿ ವಿವರವನ್ನು ನೀಡಬೇಕು. ಇನ್ನು ವೆಬ್‌ಸೈಟ್‌ನಲ್ಲಿ ಆಸ್ತಿಗಳ ಘೋಷಣೆ ಮಾಡುವುದು ಸ್ವಯಂಪ್ರೇರಿತ ಆಧಾರದ ಮೇಲೆ ಇರುತ್ತದೆ’ ಎಂದು ಸುಪ್ರೀಂ ಕೋರ್ಟ್‌ ವೆಬ್‌ಸೈಟ್‌ ತಿಳಿಸಿದೆ,.