ಸಾರಾಂಶ
13 ವರ್ಷಕ್ಕಿಂತ ಕೆಳಗಿನ ಮಕ್ಕಳು ಸಾಮಾಜಿಕ ಮಾಧ್ಯಮಗಳನ್ನು ಬಳಸುವುದನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ‘ಈ ಸಂಬಂಧ ಕಾನುನು ಜಾರಿಗೆ ತರುವಂತೆ ಸಂಸತ್ತನ್ನು ಕೋರಿಕೊಳ್ಳಿ’ ಎಂದು ಅದು ಅರ್ಜಿದಾರರಿಗೆ ಸೂಚಿಸಿದೆ.
ನವದೆಹಲಿ: 13 ವರ್ಷಕ್ಕಿಂತ ಕೆಳಗಿನ ಮಕ್ಕಳು ಸಾಮಾಜಿಕ ಮಾಧ್ಯಮಗಳನ್ನು ಬಳಸುವುದನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ‘ಈ ಸಂಬಂಧ ಕಾನುನು ಜಾರಿಗೆ ತರುವಂತೆ ಸಂಸತ್ತನ್ನು ಕೋರಿಕೊಳ್ಳಿ’ ಎಂದು ಅದು ಅರ್ಜಿದಾರರಿಗೆ ಸೂಚಿಸಿದೆ.
ಜೆ಼ಪ್ಟ್ ಫೌಂಡೇಶನ್ ಪರವಾಗಿ ಮೋಜಿನಿ ಪ್ರಿಯಾ ಎಂಬ ವಕೀಲೆ ಈ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಸಾಮಾಜಿಕ ಮಾಧ್ಯಮಗಳ ಬಳಕೆಯಿಂದ ಎಳೆ ಮನಸ್ಸುಗಳ ಮೇಲಾಗುವ ದೈಹಿಕ, ಮಾನಸಿಕ ಪರಿಣಾಮವನ್ನು ಉಲ್ಲೇಖಿಸಿದ್ದು, 13ರಿಂದ 18 ವರ್ಷದ ಮಕ್ಕಳು ಅವುಗಳನ್ನು ಬಳಸುವುದನ್ನು ನಿಯಂತ್ರಿಸಲು ವಯಸ್ಸು ಪರಿಶೀಲನೆ, ಬಯೋಮೆಟ್ರಿಕ್ ಧೃಡೀಕರಣವನ್ನು ಕಡ್ಡಾಯಗೊಳಿಸಬೇಕು ಎಂದು ಕೋರಲಾಗಿತ್ತು. ಅಂತೆಯೇ, ಮಕ್ಕಳ ಸುರಕ್ಷತಾ ನಿಯಮಗಳನ್ನು ಪಾಲಿಸದ ಸಾಮಾಜಿಕ ಮಾಧ್ಯಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆಯೂ ಕೇಳಿಕೊಳ್ಳಲಾಗಿತ್ತು.ಈ ಅರ್ಜಿಗೆ ಪ್ರತಿಕ್ರಿಯಿಸಿರುವ ನ್ಯಾ। ಬಿ.ಆರ್. ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಾಶಿ, ‘ಇದು ಕಾನೂನಿನ ವ್ಯಾಪ್ತಿಗೆ ಒಳಪಡುತ್ತದೆ. ಈ ಬಗ್ಗೆ ಸಂಬಂಧಿಸಿದವರ ಎದುರು ಪ್ರಸ್ತಾಪಿಸಿ. ಅವರು ಅದನ್ನು 8 ವಾರಗಳೊಳಗಾಗಿ ಪರಿಗಣಿಸಬೇಕು’ ಎಂದು ಹೇಳಿದರು.