ಚುನಾವಣಾ ಆಯುಕ್ತರ ನೇಮಕ ಕಾಯ್ದೆಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯ ನಕಾರ

| Published : Feb 14 2024, 02:19 AM IST / Updated: Feb 14 2024, 07:45 AM IST

ಸರ್ವೋಚ್ಚ ನ್ಯಾಯಾಲಯ
ಚುನಾವಣಾ ಆಯುಕ್ತರ ನೇಮಕ ಕಾಯ್ದೆಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯ ನಕಾರ
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಆಯುಕ್ತರ ನೇಮಕಕ್ಕೆ ಭಾರತದ ಮುಖ್ಯ ನ್ಯಾಯಾಧೀಶರು (ಸಿಜೆಐ) ಅವರಿಲ್ಲದ ಸಮಿತಿ ರಚಿಸಿರುವ ಹೊಸ ಕಾನೂನಿಗೆ ತಡೆ ನೀಡಲು ಸುಪ್ರೀಂಕೋರ್ಟ್‌ ಮಂಗಳವಾರ ನಿರಾಕರಿಸಿದೆ.

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಆಯುಕ್ತರ ನೇಮಕಕ್ಕೆ ಭಾರತದ ಮುಖ್ಯ ನ್ಯಾಯಾಧೀಶರು (ಸಿಜೆಐ) ಅವರಿಲ್ಲದ ಸಮಿತಿ ರಚಿಸಿರುವ ಹೊಸ ಕಾನೂನಿಗೆ ತಡೆ ನೀಡಲು ಸುಪ್ರೀಂಕೋರ್ಟ್‌ ಮಂಗಳವಾರ ನಿರಾಕರಿಸಿದೆ. 

ಆದರೆ, ಈ ಬಗ್ಗೆ ಸರ್ಕಾರದಿಂದ ಸ್ಪಷ್ಟನೆ ಬಯಸಿ, ಏಪ್ರಿಲ್‌ನಲ್ಲಿ ವಿಚಾರಣೆ ನಿಗದಿಪಡಿಸಿದೆ.

ಚುನಾವಣಾ ಆಯುಕ್ತರನ್ನು ಶಿಫಾರಸು ಮಾಡುವ ಸಮಿತಿಯಿಂದ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅವರನ್ನು ಹೊರಗಿಡುವ ಹೊಸ ಕಾನೂನನ್ನು ಸರ್ಕಾರ ರಚನೆ ಮಾಡಿದೆ. 

ಸಮಿತಿಯಲ್ಲಿ ಪ್ರಧಾನಮಂತ್ರಿ, ಒಬ್ಬ ಕೇಂದ್ರ ಸಚಿವ ಹಾಗೂ ಲೋಕಸಭೆಯ ವಿಪಕ್ಷ ನಾಯಕಗೆ ಅವಕಾ ನೀಡಲಾಗಿದೆ. 

ಆದರೆ ಸಿಜೆಐ ಇಲ್ಲದಿದ್ದರೆ, ಸಮಿತಿ ನಿಷ್ಪಕ್ಷಪಾತವಾಗಿ ಕೆಲಸ ಮಾಡಲಾಗದು ಎಂದು ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಅವರ ಸಂಸ್ಥೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ