ಸುಪ್ರೀಂನಲ್ಲಿ ಇಂದು ಮತ್ತೆ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ನಡೆಸಲಾಗುವ ನೀಟ್‌ ಕುರಿತು ವಿಚಾರಣೆ

| Published : Jul 22 2024, 01:18 AM IST / Updated: Jul 22 2024, 04:58 AM IST

ಸುಪ್ರೀಂನಲ್ಲಿ ಇಂದು ಮತ್ತೆ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ನಡೆಸಲಾಗುವ ನೀಟ್‌ ಕುರಿತು ವಿಚಾರಣೆ
Share this Article
  • FB
  • TW
  • Linkdin
  • Email

ಸಾರಾಂಶ

ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ನಡೆಸಲಾಗುವ ಪರೀಕ್ಷೆ ‘ನೀಟ್‌’ನಲ್ಲಿ ವ್ಯಾಪಕ ಅಕ್ರಮಗಳಾಗಿವೆ ಎಂಬ ಆರೋಪ ಸಂಬಂಧ ಸಲ್ಲಿಕೆಯಾಗಿರುವ ಹತ್ತಾರು ಅರ್ಜಿಗಳನ್ನು ಸರ್ವೋಚ್ಚ ನ್ಯಾಯಾಲಯ ಸೋಮವಾರ ಮತ್ತೆ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.

 ನವದೆಹಲಿ : ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ನಡೆಸಲಾಗುವ ಪರೀಕ್ಷೆ ‘ನೀಟ್‌’ನಲ್ಲಿ ವ್ಯಾಪಕ ಅಕ್ರಮಗಳಾಗಿವೆ ಎಂಬ ಆರೋಪ ಸಂಬಂಧ ಸಲ್ಲಿಕೆಯಾಗಿರುವ ಹತ್ತಾರು ಅರ್ಜಿಗಳನ್ನು ಸರ್ವೋಚ್ಚ ನ್ಯಾಯಾಲಯ ಸೋಮವಾರ ಮತ್ತೆ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌, ನ್ಯಾಯಾಧೀಶರಾದ ಜೆ.ಬಿ. ಪರ್ದೀವಾಲಾ ಹಾಗೂ ಮನೋಜ್‌ ಮಿಶ್ರಾ ಅವರ ಪೀಠ ಶನಿವಾರ 40ಕ್ಕೂ ಹೆಚ್ಚು ಅರ್ಜಿಗಳನ್ನು ವಿಚಾರಣೆ ನಡೆಸಲಿದೆ. ದೇಶಾದ್ಯಂತ ವಿವಿಧ ಹೈಕೋರ್ಟ್‌ಗಳಲ್ಲಿ ದಾಖಲಾಗಿರುವ ಅರ್ಜಿಗಳನ್ನು ಸುಪ್ರೀಂಕೋರ್ಟ್‌ಗೇ ವರ್ಗಾಯಿಸಬೇಕು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಸಲ್ಲಿಸಿರುವ ಅರ್ಜಿಯೂ ಇದರಲ್ಲಿ ಸೇರಿದೆ.

ದೇಶಾದ್ಯಂತ ನೀಟ್‌-ಯುಜಿ ಪರೀಕ್ಷೆ ಮೇ 5ರಂದು ನಡೆದಿತ್ತು. ಈ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಂಕ ಹೆಚ್ಚಳ ಸೇರಿದಂತೆ ಹಲವಾರು ಅಕ್ರಮಗಳು ನಡೆದಿವೆ ಎಂಬ ಆರೋಪ ಕೇಳಿಬಂದಿತ್ತು. ನ್ಯಾಯಾಲಯದ ಆದೇಶದ ಮೇರೆಗೆ ಎನ್‌ಟಿಎ ಶನಿವಾರವಷ್ಟೇ ನಗರ ಹಾಗೂ ಪರೀಕ್ಷಾ ಕೇಂದ್ರವಾರು ಫಲಿತಾಂಶವನ್ನು ಪ್ರಕಟಿಸಿತ್ತು.

ಈ ಫಲಿತಾಂಶವನ್ನು ವಿಶ್ಲೇಷಣೆಗೆ ಒಳಪಡಿಸಿದಾಗ, ಅಕ್ರಮ ನಡೆದಿದೆ ಎಂಬ ಆರೋಪ ವ್ಯಕ್ತವಾಗಿದ್ದ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಉತ್ತಮ ಸಾಧನೆ ಮಾಡಿದ್ದು ಕಂಡುಬಂದಿಲ್ಲ. ಇದು ಅಚ್ಚರಿಗೆ ಕಾರಣವಾಗಿದೆ.